ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಆ.27: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರ ದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.
ಭಾಗವಹಿಸುವವರ ಸಂಶೋಧನೆ /ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ಭಿನ್ನವಾಗಿರಬೇಕು. ಹಾಗೂ ವ್ಯಾಪಕ ವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಅರ್ಜಿಯನ್ನು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಸೆ.7 ರೊಳಗೆ ಸಲ್ಲಿಸಬಹುದು ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story