ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಉಡುಪಿ, ಆ.27: ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ ದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ (ಐಎಸ್‌ಬಿ), ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈಗಾಗಲೇ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಆ.31 ರೊಳಗೆ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಡಿ ಅರ್ಜಿ ನಮೂನೆಯನ್ನು ನಿಗಮದ - http://adcl.karnataka.gov.in- ನಲ್ಲಿ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿ -http://adijambava.karnataka.gov.in- ವೆಬ್ೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ: 0820-2574884ನ್ನು ಸಂಪರ್ಕಿಸಬಹುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ







