Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ...

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‍ಪಿಎಸ್ ಯೋಜನೆ ಜಾರಿಗೆ ಡಾ.ಕೆ.ಸುಧಾಕರ್ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ27 Aug 2020 8:50 PM IST
share
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‍ಪಿಎಸ್ ಯೋಜನೆ ಜಾರಿಗೆ ಡಾ.ಕೆ.ಸುಧಾಕರ್ ಹಸಿರು ನಿಶಾನೆ

ಬೆಂಗಳೂರು, ಆ.27: ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‍ಪಿಎಸ್) ಸಚಿವ ಡಾ.ಕೆ.ಸುಧಾಕರ್ ಹಸಿರು ನಿಶಾನೆ ತೋರಿದ್ದಾರೆ.

ಸರಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜು, ಇವುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ.

ಸಚಿವ ಸುಧಾಕರ್ ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದ್ದ ಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸುಧಾಕರ್, ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ  ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು ಅಧಿಕೃತ ಆದೇಶ ಹೊರಬಿದ್ದಿದೆ.

ಕೊರೋನದಿಂದಾಗಿ ಸರಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಎನ್‍ಪಿಎಸ್ ಯೋಜನೆ ಜಾರಿಗೊಳಿಸುವುದು ಸೂಕ್ತ ಎಂಬ ಸುಧಾಕರ್ ಆಗ್ರಹಕ್ಕೆ ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿ, ತಕ್ಷಣ ಕ್ರಮ ಜರುಗಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತಿಮವಾಗಿ ಹಣಕಾಸು ಇಲಾಖೆ ಸಮ್ಮತಿ ದೊರಕಿದ್ದು ಆದೇಶ ಹೊರಡಿಸಿದೆ.

ಒಟ್ಟು 27 ಸಂಸ್ಥೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ 5949 ಅಧಿಕಾರಿ ಮತ್ತು ಸಿಬ್ಬಂದಿಗೆ ಯೋಜನೆ ಪ್ರಯೋಜನ ದೊರಕಲಿದೆ. ಇದರಲ್ಲಿ 2061 ಮಂದಿ ಎಐಸಿಟಿಇ ಅನುಮೋದನೆ ಪಡೆದ ಹುದ್ದೆಗಳಾಗಿದ್ದರೆ, 3888 ಎಐಸಿಟಿಇ ಯೇತರ ಹುದ್ದೆಗಳಾಗಿವೆ. ಈ ನೂತನ ಯೋಜನೆಯಿಂದ ಸರಕಾರಕ್ಕೆ ಪ್ರತಿ ವರ್ಷ 77.27 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. 2006ರ ಎಪ್ರಿಲ್ 1 ರ ನಂತರ ಕಾಯಂ ಆಗಿ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಕ್ಷಣದಿಂದಲೇ ನೂತನ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಬೋಧಕ ಸಿಬ್ಬಂದಿ ಬೇಡಿಕೆಯಾಗಿದ್ದ ಎಳನೆ ವೇತನ ಆಯೋಗದ ಶಿಫಾರಸ್ಸುಗಳಿಗೆ ಅನುಗುಣವಾಗಿ ವೇತನ ಮತ್ತು ಭತ್ತೆ ನೀಡುವ ಪ್ರಸ್ತಾವನೆಗೂ ಸುಧಾಕರ್ ಅನುಮೋದನೆ ದೊರಕಿಸಿಕೊಟ್ಟಿದ್ದರು. ಹಾಗೆಯೇ ಐದಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವೈದ್ಯ ವಿದ್ಯಾರ್ಥಿಗಳ ಶಿಷ್ಯ ವೇತನ ಪ್ರಸ್ತಾವನೆಗೂ ಅನುಮತಿ ದೊರಕಿಸಿ ಈಗಾಗಲೆ ಪರಿಷ್ಕೃತ ಶಿಷ್ಯ ವೇತನ ಆದೇಶ ಜಾರಿಯಾಗಿದೆ. ಇದೀಗ ಅನೇಕ ದಿನಗಳಿಂದ ಅನುಮತಿಗೆ ಕಾಯುತ್ತಿದ್ದ ಎನ್‍ಪಿಎಸ್ ಯೋಜನೆಗೂ ಮುಕ್ತಿ ದೊರಕಿದಂತಾಗಿದೆ.

ಕೊರೋನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಎನ್‍ಪಿಎಸ್ ಯೋಜನೆ ಜಾರಿಗೊಳಿಸಿರುವ ಈ ತೀರ್ಮಾನ ಸಾರ್ಥಕಭಾವ ಮೂಡಿಸಿದೆ. ನಮ್ಮ ಮನವಿಗೆ ಸ್ಪಂದಿಸಿ ಅನಮತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪಗೆ ಇಲಾಖೆ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X