Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ನಶಿಸಿರುವ ಅರಣ್ಯಗಳ...

ದೇಶದಲ್ಲಿ ನಶಿಸಿರುವ ಅರಣ್ಯಗಳ ಪುನರುಜ್ಜೀವನಕ್ಕೆ ಖಾಸಗಿ ಸಹಭಾಗಿತ್ವ: ನೀತಿ ಆಯೋಗದ ಯೋಜನೆ

ವಾರ್ತಾಭಾರತಿವಾರ್ತಾಭಾರತಿ27 Aug 2020 9:24 PM IST
share
ದೇಶದಲ್ಲಿ ನಶಿಸಿರುವ ಅರಣ್ಯಗಳ ಪುನರುಜ್ಜೀವನಕ್ಕೆ ಖಾಸಗಿ ಸಹಭಾಗಿತ್ವ: ನೀತಿ ಆಯೋಗದ ಯೋಜನೆ

ಹೊಸದಿಲ್ಲಿ,ಆ.27: ಅರಣ್ಯೀಕರಣ ಕಾರ್ಯಕ್ರಮಗಳಲ್ಲಿ ಸರಕಾರಿ-ಖಾಸಗಿ (ಪಿಪಿಪಿ) ಸಹಭಾಗಿತ್ವವನ್ನು ತರಲು ಹಾಗೂ ನಶಿಸಿರುವ ನೈಸರ್ಗಿಕ ಅರಣ್ಯಗಳಲ್ಲಿ ಖಾಸಗಿ ನೆಡುತೋಪುಗಳಿಗೆ ಅವಕಾಶ ಕಲ್ಪಿಸಲು ಪರಿಕಲ್ಪನೆಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ನೀತಿ ಆಯೋಗವು ನಿರತವಾಗಿದೆ ಎಂದು ಆನ್‌ಲೈನ್ ಸುದ್ದಿಸಂಸ್ಥೆ ‘ದಿ ಪ್ರಿಂಟ್’ ವರದಿ ಮಾಡಿದೆ.

ಸುದ್ದಿಸಂಸ್ಥೆಗೆ ಲಭ್ಯವಾಗಿರುವ ಆಯೋಗದ ದಾಖಲೆಯಂತೆ ಹಾಲಿ ಜಾರಿಯಲ್ಲಿರುವ ರಾಷ್ಟ್ರೀಯ ಅರಣ್ಯೀಕರಣ ಕಾರ್ಯಕ್ರಮಗಳು ನಿರೀಕ್ಷಿತ ಪರಿಣಾಮಗಳನ್ನು ನೀಡಲು ವಿಫಲವಾಗಿರುವುದರಿಂದ ಈ ಕ್ಷೇತ್ರದಲ್ಲಿ ಪಿಪಿಪಿ ಸಹಭಾಗಿತ್ವವು ಅಗತ್ಯವಾಗಿದೆ ಹಾಗೂ ಹೂಡಿಕೆಗಳನ್ನು ಪುನರುಜ್ಜೀವನಗೊಳಿಸುವ,ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜ್ಞಾನ ಹಾಗೂ ಸಾಮರ್ಥ್ಯ ಮತ್ತು ಮಾನವ ಶಕ್ತಿಯನ್ನು ಬಳಸಿಕೊಳ್ಳುವ ಅಗತ್ಯವಿದೆ.

 ಕಟ್ಟಿಗೆ ಮತ್ತು ಕಟ್ಟಿಗೆಯೇತರ ಅರಣ್ಯ ಉತ್ಪನ್ನಗಳು,ಸಾವಯವ ಕೃಷಿ ಪೂರೈಕೆ ಸರಪಳಿ,ಪರಿಸರ ಮತ್ತು ಅರಣ್ಯ ಶಿಬಿರಗಳು,ಮನರಂಜನಾ ಚಟುವಟಿಕೆ ಇತ್ಯಾದಿಗಳಲ್ಲಿ ಪಿಪಿಪಿ ಮಾದರಿಯನ್ನು ಜಾರಿಗೊಳಿಸಬಹುದಾಗಿದೆ ಎಂದು ಆಯೋಗವು ಸಿದ್ಧಪಡಿಸಿರುವ ಯೋಜನಾ ವರದಿಯಲ್ಲಿ ಸೂಚಿಸಲಾಗಿದೆ.

ನಿಯಮಗಳಂತೆ ಪಬ್ಲಿಕ್ ಲಿಸ್ಟೆಡ್ ಕಂಪನಿಗಳು,ಸಹಕಾರಿ ಸಂಸ್ಥೆಗಳು,ಸಾರ್ವಜನಿಕ ಕ್ಷೇತ್ರದ ಉದ್ಯಮಗಳು,ರಾಜ್ಯ ಸರಕಾರಗಳ ಅರಣ್ಯ ಅಭಿವೃದ್ಧಿ ನಿಗಮಗಳು,ಗ್ರಾಮಸಭೆಗಳು/ಗ್ರಾಮ ಪಂಚಾಯತಿಗಳು ಹಾಗೂ ಜಂಟಿ ಅರಣ್ಯ ವ್ಯವಸ್ಥಾಪನೆ ಸಮಿತಿಗಳು ಅರಣ್ಯೀಕರಣ ಪಾಲುದಾರರಾಗಬಹುದು. ಸ್ವಾಯತ್ತ ಜಿಲ್ಲಾ ಮತ್ತು ಗ್ರಾಮಾಭಿವೃದ್ಧಿ ಮಂಡಳಿಗಳು ಹಾಗೂ ಎನ್‌ಜಿಒಗಳನ್ನೂ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು.

ನೀತಿ ಆಯೋಗದ ಯೋಜನಾ ವರದಿಗೆ ಅಂತಿಮ ಮುದ್ರೆ ಬಿದ್ದರೆ ಖಾಸಗಿ ಕಂಪನಿಗಳೂ ಈ ಪಟ್ಟಿಗೆ ಸೇರ್ಪಡೆಗೊಳ್ಳಲಿವೆ.

ಇದು ಕರಡು ಮಾತ್ರವಾಗಿದ್ದು,ಸರಕಾರದ ಅಂತಿಮ ನೀತಿಯಲ್ಲ ಎಂದು ಪರಿಸರ,ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವಕ್ತಾರರು ತನ್ನನ್ನು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ನಶಿಸಿರುವ ಅರಣ್ಯಗಳತ್ತ ಗಮನ ಹರಿಸುವುದನ್ನು ಸ್ವಾಗತಿಸಿರುವ ತಜ್ಞರು,ಖಾಸಗಿಯವರನ್ನು ಅರಣ್ಯೀಕರಣದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X