ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಆ.27: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ, ಡಿಪ್ಲೋಮ, ಪದವಿ, ಬಿಎಡ್, ಬಿಪಿಎಡ್, ಸ್ನಾತಕೋತ್ತರ ಪದವಿ, ಎಂಎಡ್, ಎಂಪಿಡ್, ಕೃಷಿ, ಪಶು ಸಂಗೋಪನೆ, ಇಂಜಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್‌ಗಳ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.sw.kar.nic.in- ಅಥವಾ ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ:0820-2574892 ನ್ನು ಸಂಪರ್ಕಿಸಲು ಇಲಾಖೆ ಪ್ರಕಟಣೆ ತಿಳಿಸಿದೆ.
Next Story





