ಪ್ರೌಢ/ಪ್ರಾಥಮಿಕ ಬಿಐಆರ್‌ಟಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಆ.27: ಸಾರ್ವಜನಿಕ ಶಿಕ್ಷಣ ಇಲಾಖೆಗೆ ಪ್ರಸ್ತಕ ಸಾಲಿನ ಸಮಗ್ರ ಶಿಕ್ಷಣ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢ/ಪ್ರಾಥಮಿಕ ಬಿಐಆರ್‌ಟಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





