ಸಿಎಂ ಯಡಿಯೂರಪ್ಪ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ

ಧಾರವಾಡ, ಆ.27: ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗೋಕಾಕ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕಳೆದ ನವೆಂಬರ್ ನಲ್ಲಿ ನಡೆದ ಉಪಚುನಾವಣೆ ಸಂದರ್ಭದಲ್ಲಿ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಬಿಎಸ್‍ವೈ ವಿರುದ್ಧ 2019ರ ನವೆಂಬರ್ 26ರಂದು ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಗೋಕಾಕ ಕೋರ್ಟ್ ಬಿಎಸ್‍ವೈ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು. ಬಿಎಸ್‍ವೈ ಅವರು ಎಫ್‍ಐಆರ್ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠವು ವಕೀಲರ ವಾದ ಆಲಿಸಿ ತೀರ್ಪು ಕಾಯ್ದಿರಿಸಿತು.
Next Story





