ರಾಜ್ಯ, ಕೇಂದ್ರ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲ : ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಪ

ಪಡುಬಿದ್ರಿ: ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿಯ ಸರ್ಕಾರ ಜನ-ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಮತ್ತು ಕೊರೊನಾ ಭೀತಿಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸರ್ಕಾರ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಗುರುವಾರ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ "ಕಾಂಗ್ರೆಸ್ ಆರೋಗ್ಯ ಹಸ್ತ" ಕಾರ್ಯಕ್ರಮದಡಿಯಲ್ಲಿ ಪಕ್ಷದ ಕೊರೋನ ವಾರಿಯರ್ಸ್‍ಗಳಿಗೆ ಕಿಟ್ ವಿತರಿಸಿ, ಮಾತನಾಡಿದರು.
ಚುನಾವಣೆಗೆ ಸಜ್ಜಾಗಿ: ಗ್ರಾಮ ಪಂಚಾಯತ್ ಚುನಾವಣೆ ಶೀಘ್ರದಲ್ಲೇ ಘೋಷಣೆ ಯಾಗಲಿದ್ದು, ಕಾರ್ಯಕರ್ತರು ಸಜ್ಜಾಗುವಂತೆ ವಿನಯ ಕುಮಾರ್ ಸೊರಕೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನೀಡಿದ ಜನಪರ ಕಾರ್ಯಕ್ರಮಗಳು ಮತ್ತು ಬಿ. ಜೆ. ಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆಮಾಡಿಕೊಡಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಸುವರ್ಣ ಮತ್ತು ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈ. ಸುಕುಮಾರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಮೊಹಮ್ಮದ್ ಕಾಪು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ತಾಲೂಕ ಪಂಚಾಯತ್ ಸದಸ್ಯ ದಿನೇಶ್ ಕೋಟ್ಯಾನ್, ಪಕ್ಷದ ಪ್ರಮುಖರಾದ ದಮಯಂತಿ ವಿ. ಅಮೀನ್, ವೈ.ಸುಧೀರ್, ಹಸನ್ ಬಾವ ಕಂಚಿನಡ್ಕ, ಅಬ್ದುಲ್ ರೆಹಮಾನ್ ಕನ್ನಂಗಾರ್, ಸುಚರಿತ ಲಕ್ಷ್ಮಣ, ಜ್ಯೋತಿ ಮೆನನ್,ಗಣೇಶ್ ಕೋಟ್ಯಾನ್, ರಮೀಜ್, ಅಬ್ದುಲ್ ರಝಕ್ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ್ ಪೂಜಾರಿ ಸ್ವಾಗತಿಸಿದರು, ಕಾರ್ತಿಕ್ ವಂದಿಸಿದರು







