Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಧುನಿಕ ತಂತ್ರಜ್ಞಾನದ ಮೂಲಕ ಕೊಳಚೆ ನೀರು...

ಆಧುನಿಕ ತಂತ್ರಜ್ಞಾನದ ಮೂಲಕ ಕೊಳಚೆ ನೀರು ಶುದ್ಧೀಕರಣ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ27 Aug 2020 10:52 PM IST
share
ಆಧುನಿಕ ತಂತ್ರಜ್ಞಾನದ ಮೂಲಕ ಕೊಳಚೆ ನೀರು ಶುದ್ಧೀಕರಣ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಆ. 27: `ನಗರದ ವೃಷಭಾವತಿ ನದಿಯಿಂದ ರಾಮನಗರ ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳ ಜಮೀನುಗಳಿಗೆ ಕೊಳಚೆ ನೀರು ಹೋಗುತ್ತಿದ್ದು, ಆಧುನಿಕ ತಂತ್ರಜ್ಞಾನದ ಮೂಲಕ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ಹೇಳಿದ್ದಾರೆ.

ಗುರುವಾರ ರಾಮನಗರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೃಷಭಾವತಿ ನದಿಯಿಂದ ವಾರ್ಷಿಕ 5ರಿಂದ 6 ಟಿಎಂಸಿ ಕೊಳಚೆ ನೀರು ಹೋಗುತ್ತಿದೆ. ಸದ್ಯ ನಾಯಂಡಹಳ್ಳಿ, ನೀಲಸಂದ್ರ ಮತ್ತು ದೊಡ್ಡಬೆಲೆಯಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕಗಳು ಇವೆ. ಇವು ಸಾಕಾಗುತ್ತಿಲ್ಲ. ಹೀಗಾಗಿ ನದಿಯಲ್ಲಿ ಹರಿಯುವ ಪೂರ್ಣ ಪ್ರಮಾಣದ ನೀರನ್ನು ಶುದ್ಧೀಕರಿಸಲು ಆಗುತ್ತಿಲ್ಲ. ಹೀಗಾಗಿ ಕೊಳಚೆ ನೀರು ಹರಿದು ಹೋಗುತ್ತಿದೆ. ಇದನ್ನು ಸರಿ ಮಾಡಬೇಕಾದರೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಕೊಳಚೆ ನೀರಿನಿಂದಲೇ ಇಟ್ಟುಮೊಡು, ರಾಮನಹಳ್ಳಿ, ಗೋಡಹಳ್ಳಿ, ಬೈರಮಂಗಲ ಸೇರಿದಂತೆ 19 ಗ್ರಾಮಗಳ ರೈತರು ಕೃಷಿಗೆ ಬಳಸುತ್ತಿದ್ದಾರೆ. ಇವರಿಗೆ ಶುದ್ದೀಕರಣ ನೀರು ಕೊಡುವುದರಿಂದ ಹೆಚ್ಚು ಅನುಕೂಲ ಆಗುತ್ತದೆ. ಇಲ್ಲಿ ಬೆಳೆದ ಕೃಷಿ ಉತ್ಪನ್ನಗಳನ್ನು ಬಳಸುವ ಜನರಿಗೂ ಆರೋಗ್ಯದ ಸಮಸ್ಯೆ ಬರುವುದಿಲ್ಲ. ಬೈರಮಂಗಲ ಕೆರೆಗೆ ಕೇವಲ ಶುದ್ಧೀಕರಿಸಿದ ನೀರು ಹೋಗುವ ಹಾಗೆ ಮಾಡಲು ಪ್ರತ್ಯೇಕ ಕಾಲುವೆ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ 35 ಕೋಟಿ ರೂಪಾಯಿ ವೆಚ್ಚದಲ್ಲಿ 26 ಕಡೆ ಚೆಕ್ ಡ್ಯಾಮ್‍ಗಳನ್ನು ನಿರ್ಮಿಸುತ್ತಿದ್ದು ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಕಣ್ವ ಜಲಾಶಯದಿಂದ ನೀರು ಎತ್ತಿ 18 ಕೆರೆಗಳಿಗೆ ನೀರು ತುಂಬಿಸುವ 28 ಕೋಟಿ ರೂ.ವೆಚ್ಚದ ಯೋಜನೆ ಪ್ರಗತಿಯಲ್ಲಿ ಇದ್ದು 18 ತಿಂಗಳಲ್ಲಿ ಮುಗಿಸುವುದು. ಬೈರಮಂಗಲ ಎಡ ಮತ್ತು ಬಲದಂಡೆ ಕಾಲುವೆಯನ್ನು 106 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲು ಯೋಜನೆ ಸಿದ್ಧ ಆಗಿದ್ದು ಆದಷ್ಟು ಬೇಗ ಟೆಂಡರ್ ಕರೆಯಲಾಗುವುದು ಎಂದರು.

ಸಣ್ಣ ನೀರಾವರಿ ಇಲಾಖೆ ಸೂಪರಿಂಟೆಂಡೆಂಟ್ ಇಂಜಿನಿಯರ್ ಎನ್.ನಾಗರಾಜು, ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎಂ.ಕಿಶೋರ್, ಸಹಾಯಕ ಇಂಜಿನಿಯರ್ ಕೊಟ್ರೇಶ್ ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X