ಅಧಿವೇಶನದಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಚರ್ಚೆ: ಪ್ರಭು ಚೌಹಾಣ್

ಕಲಬುರ್ಗಿ, ಆ.27: ಮುಂಬರುವ ಅಧಿವೇಶನದಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಚರ್ಚಿಸಿ ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗುರುವಾರ ಕಲಬುರ್ಗಿ ನಗರದಲ್ಲಿ ಇಲಾಖೆಯಿಂದ ಜಾನುವಾರುಗಳ ಚಿಕಿತ್ಸೆಗಾಗಿ ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಿಸಲಾಗಿತ್ತು. ಅದರಂತೆ ಜಾರಿಗೆ ತರುತ್ತೇವೆ ಎಂದರು.
ಬೆಂಗಳೂರಿನಲ್ಲಿ 10 ಆಂಬ್ಯುಲೆನ್ಸ್ ಸೇರಿ ರಾಜ್ಯಾದ್ಯಂತ 41 ಆಂಬ್ಯುಲೆನ್ಸ್ ಖರೀದಿಸಲಾಗಿದ್ದು, ಮತ್ತಷ್ಟು ಆಂಬ್ಯುಲೆನ್ಸ್ ಖರೀದಿಸುವ ಚಿಂತನೆ ನಡೆದಿದೆ ಎಂದರು.
ಬಿಜೆಪಿ ಘಟಕದ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಕಲಬುರ್ಗಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಸಿಎಂ ಬಿಎಸ್‍ವೈ ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Next Story





