ಗಾಯಕ ಜಗದೀಶ್ ಪುತ್ತೂರ್‌ಗೆ 'ಒಮನ್ ತುಳುವೆರ್' ಸಂಘಟನೆಯಿಂದ ಸನ್ಮಾನ

ಮಂಗಳೂರು, ಆ.28: ತುಳುನಾಡ ಗಾನ ಗಂಧರ್ವ ಖ್ಯಾತಿಯ ಗಾಯಕ ಜಗದೀಶ್ ಪುತ್ತೂರು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು 'ಒಮನ್ ತುಳುವೆರ್' ಸಂಘಟನೆಯ ವತಿಯಿಂದ ಸನ್ಮಾನ ಮಾಡಲಾಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗದೀಶ್ ಪುತ್ತೂರು ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ತುಳು ನಾಟಕ ಹಾಗೂ ಚಲನಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಈ ಸನ್ಮಾನ ಜಗದೀಶ್‌ರವರ ಸಾಧನೆಗೆ ಮತ್ತಷ್ಟು ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.
ಅತಿಥಿಗಳಾಗಿ ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ, ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಸಂದೇಶ್ ಬಂಗೇರ ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Next Story







