Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಪ್ರಸಂಗಕರ್ತ ಡಾ. ನಾರಾಯಣ...

ಯಕ್ಷಗಾನ ಪ್ರಸಂಗಕರ್ತ ಡಾ. ನಾರಾಯಣ ಶೆಟ್ಟಿ ನಾಡು-ನುಡಿಗೆ ನೀಡಿದ ಕೊಡುಗೆ ಅಪಾರ : ಚಂದ್ರಶೇಖರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ28 Aug 2020 4:23 PM IST
share
ಯಕ್ಷಗಾನ ಪ್ರಸಂಗಕರ್ತ ಡಾ. ನಾರಾಯಣ ಶೆಟ್ಟಿ ನಾಡು-ನುಡಿಗೆ ನೀಡಿದ ಕೊಡುಗೆ ಅಪಾರ : ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಖ್ಯಾತ ಯಕ್ಷಗಾನ ಪ್ರಸಂಗಕರ್ತ, ಅಭಿನವ ನಾಗವರ್ಮ ಛಂದೋಬ್ರಹ್ಮ ಖ್ಯಾತಿಯ ಕವಿ ಡಾ. ಎನ್. ನಾರಾಯಣ ಶೆಟ್ಟಿ ಕರ್ನಾಟಕದ ಹೆಮ್ಮೆಯ ಪುತ್ರ, ನಾಡು ನುಡಿಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗು ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಅವರು ತಮ್ಮ ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಗುರುವಾರ ನಿಧನರಾದ ಡಾ. ನಾರಾಯಣ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಲೋಕದಲ್ಲಿ ಮಹತ್ತರವಾದ ಸಾಧನೆ ಮಾಡಿ, ಬಹುಮುಖ ಪ್ರತಿಭೆಯ ವಿದ್ವಾಂಸರಾದ  ಡಾ. ಎನ್ .ನಾರಾಯಣ ಶೆಟ್ಟಿ ಅಪೂರ್ವ ಸಮಾಜ ಸೇವಕರಾಗಿ, ಶಿಕ್ಷಕರಾಗಿ ಯಕ್ಷಗಾನ ಛಂದಸ್ಸು ಕ್ಷೇತ್ರದ ಸಾಧಕರಾಗಿ ಮಾಡಿದ ಸಾಧನೆ ಅನನ್ಯ. ಅವರು ಓರ್ವ ಅಜಾತಶತ್ರು ಎಂದ ಸ್ವಾಮೀಜಿ ಅವರೊಡನೆ ತಮ್ಮ ಒಡನಾಟಗಳನ್ನು ಸ್ಮರಿಸಿಕೊಂಡರು.

ಈ ಸಂದರ್ಭ ಮಾತೃಶ್ರೀ ಶಾರದಮ್ಮ, ಜ್ಯೋತಿಷಿ ವಿಶ್ವನಾಥ ಭಟ್, ಉಷಾ ಭಟ್, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ಭಟ್, ಪ್ರಜ್ವಲ್ ಭಟ್, ರೋಶನಿ ಭಟ್, ರಾಹುಲ್ ಸಿ ಭಟ್, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ, ಮುಲ್ಕಿ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ಕಾರ್ಯದರ್ಶಿ ಮೋಹನ್ ಕುಬೆವೂರು, ಸುರೇಶ್ ಶೆಟ್ಟಿ, ಆಶ್ರಮದ ಭದ್ರತಾ ಸಲಹೆಗಾರ ಮಂಜುನಾಥ್ ಗೌಡ್ರು, ಪ್ರದೀಪ್ ಗೌಡ ಮತ್ತಿತರರು ಉಪಸ್ಥಿತರಿದ್ದರು. ಪುನೀತ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

ಡಾ. ನಾರಾಯಣ ಶೆಟ್ಟರ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ ಕಿನ್ನಿಗೋಳಿ,  ಕಾರ್ನಾಡು ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಅರವಿಂದ ಪೂಂಜ, ಯಕ್ಷಗಾನ ರಂಗದ ದಿಗ್ಗಜ ಗಣೇಶ ಕೊಲಕಾಡಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸಂಸ್ಥೆಯ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ, ಶಿಮಂತೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಉದಯ ಕುಮಾರ್ ಶೆಟ್ಟಿ, ಬಾಬಾ ರಂಜನ್ ಶೆಟ್ಟಿ ಮಜಲಗುತ್ತು, ವೇದವ್ಯಾಸ ಉಡುಪ ಕಿನ್ನಿಗೊಳಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡ೦ಗ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಮುಲ್ಕಿ ವಿಜಯ ರೈತ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿ, ಯಕ್ಷಗಾನ ಕಲಾವಿದ ವಿಜಯಕುಮಾರ್ ಶೆಟ್ಟಿ ಮೈಲೊಟ್ಟು, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಾಧರ್ ಶೆಟ್ಟಿ ಬರ್ಕೆ ತೋಟ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್ ಪುನರೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಕಿನ್ನಿಗೋಳಿ ವಿಜಯ ಕಲಾವಿದರು ಸಂಘಟನೆಯ ಶರತ್ ಶೆಟ್ಟಿ ಕಿನ್ನಿಗೋಳಿ, ಸಾಮಾಜಿಕ ಕಾರ್ಯಕರ್ತರಾದ ಉದಯಕುಮಾರ್ ಶೆಟ್ಟಿ ಶಿಮಂತೂರು, ಪ್ರಾಣೇಶ್ ಹೆಜಮಾಡಿ, ಅಬ್ದುಲ್ ರಝಾಕ್ ಮುಲ್ಕಿ, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ವಾಮನ್ ಕೋಟ್ಯಾನ್ ನಡಿಕುದ್ರು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಲ್ಕಿ ಜಯಕರ್ನಾಟಕ ಸಂಘಟನೆಯ ಭಾಸ್ಕರ ಶೆಟ್ಟಿಗಾರ್, ಹರೀಶ್ ಶೆಟ್ಟಿ ಶಿಮಂತೂರು,  ಶಿಮಂತೂರು ಯುವಕ ಮಂಡಲ, ಸುಧೀರ್ ಶೆಟ್ಟಿ ಶಿಮಂತೂರು, ಯಕ್ಷಮಿತ್ರರು ಪಂಜಿನಡ್ಕದ ಸುರೇಶ್ ಕೊಲಕಾಡಿ, ಗಣಪತಿ ಭಟ್ ಚೇಳಾಯರು, ಸುಬ್ರಹ್ಮಣ್ಯ ಭಟ್  ಚೇಳಾಯರು ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X