Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 'ಜಿಎಸ್‌ಟಿ' ಪಾಲನ್ನು...

ರಾಜ್ಯದ 'ಜಿಎಸ್‌ಟಿ' ಪಾಲನ್ನು ಕೇಂದ್ರದಿಂದ ನಿರ್ದಾಕ್ಷಿಣ್ಯವಾಗಿ ಪಡೆದುಕೊಳ್ಳಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Aug 2020 5:57 PM IST
share
ರಾಜ್ಯದ ಜಿಎಸ್‌ಟಿ ಪಾಲನ್ನು ಕೇಂದ್ರದಿಂದ ನಿರ್ದಾಕ್ಷಿಣ್ಯವಾಗಿ ಪಡೆದುಕೊಳ್ಳಬೇಕು: ಸಿದ್ದರಾಮಯ್ಯ

ಬೆಂಗಳೂರು, ಆ. 28: ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಪಾಲಿಗೆ ಬರಬೇಕಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾಲನ್ನು ಕೇಂದ್ರ ಸರಕಾರದಿಂದ ನಿರ್ದಾಕ್ಷಿಣ್ಯವಾಗಿ ಪಡೆದುಕೊಳ್ಳಬೇಕು. ಈ ಮೂಲಕ ರಾಜ್ಯದ ಹಕ್ಕನ್ನು ಎತ್ತಿ ಹಿಡಿಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಎಸ್‌ಟಿ ಕೌನ್ಸಿಲ್ ಸಭೆ ನಡೆದಿದ್ದು, ಸದರಿ ಸಭೆಯಲ್ಲಿ ಕೇಂದ್ರ ಸರಕಾರವು ಕೋವಿಡ್-19 ನಿಂದಾಗಿ ಜಿಎಸ್‌ಟಿ ಸಂಗ್ರಹದಲ್ಲಿ 3 ಲಕ್ಷ ಕೋಟಿ ರೂ.ಗಳಷ್ಟು ಕೊರತೆಯಾಗಲಿದೆ ಹಾಗೂ ಜಿಎಸ್‌ಟಿ ವ್ಯವಸ್ಥೆಯಿಂದ ಆಗಿರುವ ಆದಾಯ ಕೊರತೆ 97 ಸಾವಿರ ರೂ.ಗಳಷ್ಟಾಗಲಿದೆ. ಇದರಲ್ಲಿ 2.35 ಲಕ್ಷ ಕೋಟಿ ರೂ.ಗಳ ಜಿಎಸ್‌ಟಿ ಪರಿಹಾರವನ್ನು ಈ ವರ್ಷ ನೀಡಲಾಗುವುದಿಲ್ಲವೆಂದು ತಿಳಿಸಿ ಆರ್‍ಬಿಐನಿಂದ ಸಾಲ ಪಡೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.

ಕರ್ನಾಟಕವು ಕೊರೋನ ಸಂಕಷ್ಟದ ನಡುವೆಯು ಶೇ.71.61ರಷ್ಟು ಜಿಎಸ್‌ಟಿ ಸಂಗ್ರಹ ಮಾಡಿದೆ. ಆದರೆ, ಕೇಂದ್ರ ಸರಕಾರವು ರಾಜ್ಯಕ್ಕೆ 13,764 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ. ಜನವರಿಯ ವರೆಗೆ ಇದು 27ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಕೇಂದ್ರವು 15ನೆ ಹಣಕಾಸು ಆಯೋಗದ ವರದಿಯಲ್ಲೂ ರಾಜ್ಯಕ್ಕೆ ಭೀಕರ ತಾರತಮ್ಯ ಮಾಡಿದೆ. ಇದೀಗ ಜಿಎಸ್‌ಟಿಯಲ್ಲೂ ದ್ರೋಹ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರ ಸರಕಾರದ ಈ ನಿಲುವು ಸಂವಿಧಾನ ಬಾಹಿರ. ಸೆಕ್ಷನ್ 18ರ ಪ್ರಕಾರ ಕೇಂದ್ರವು ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಇದನ್ನು ಪಡೆದುಕೊಳ್ಳುವುದು ರಾಜ್ಯಗಳ ಸಂವಿಧಾನಾತ್ಮಕ ಅಧಿಕಾರ. ಆದರೆ, ಕೇಂದ್ರ ಸರಕಾರವು ಒಕ್ಕೂಟ ತತ್ವದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸುತ್ತಿದೆ. ಜಿಎಸ್‌ಟಿ ನಿಯಮಗಳ ಪ್ರಕಾರ ಕೇಂದ್ರ ಸರಕಾರವೇ ಸಾಲ ಪಡೆದು ರಾಜ್ಯಗಳಿಗೆ ಪರಿಹಾರವನ್ನು ನೀಡಬೇಕು. ಸಾಲಕ್ಕೆ ಕೇಂದ್ರ ಸರಕಾರವೇ ಜವಾಬ್ದಾರಿಯಾಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ರಾಜ್ಯಗಳ ಮೇಲೆ ಹೊರಿಸಬಾರದು.

ಈಗಾಗಲೇ ಕೇಂದ್ರವು ತನ್ನ ದುಷ್ಟ ಆರ್ಥಿಕ ನೀತಿಗಳಿಂದಾಗಿ ರಾಜ್ಯಗಳ ತೆರಿಗೆಯ ಅಧಿಕಾರವನ್ನು ನಿಧಾನವಾಗಿ ಕಿತ್ತುಕೊಳ್ಳುತ್ತಿದೆ. ಎಪಿಎಂಸಿ ಕಾಯ್ದೆಯ ತಿದ್ದುಪಡಿ ಇದಕ್ಕೆ ಅತ್ಯುತ್ತಮ ನಿದರ್ಶನ. ರಾಜ್ಯಗಳ ಆರ್ಥಿಕ ಚೈತನ್ಯವನ್ನು ಸಂಪೂರ್ಣ ನಾಶ ಮಾಡಿ ದೇಶವನ್ನು `ಬನಾನ ರಿಪಬ್ಲಿಕ್' ರೀತಿಯ ಆಡಳಿತ ವ್ಯವಸ್ಥೆಗೆ ದೇಶವನ್ನು ದೂಡಲು ಯತ್ನಿಸುತ್ತಿದೆ. ಕೇಂದ್ರ-ರಾಜ್ಯಗಳ ನಡುವೆ ಸಹಕಾರ ತತ್ವದ ಪ್ರಜಾಪ್ರಭುತ್ವ ಮಾದರಿಯ ವ್ಯವಸ್ಥೆ ಇರಬೇಕಾದ ಬದಲಿಗೆ ಸರ್ವಾಧಿಕಾರಿ ಪ್ರವೃತ್ತಿಯ ಕಡೆಗೆ ದೇಶವನ್ನು ದೂಡಲಾಗುತ್ತಿದೆ.

ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಒಂದೇ ಪಕ್ಷದ ಆಡಳಿತವಿದ್ದರೆ ಸ್ವರ್ಗವನ್ನು ಸೃಷ್ಟಿಸಿ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ್ದ ಬಿಜೆಪಿ ಸರಕಾರಗಳು ರಾಜ್ಯದ ಜನರನ್ನು ಇನ್ನಿಲ್ಲದಂತೆ ಶೋಷಿಸುತ್ತಿವೆ. ಪೆಟ್ರೋಲ್, ಡೀಸೆಲ್ ದರ 100 ರೂ.ಗಳ ಹತ್ತಿರಕ್ಕೆ ತಲುಪುತ್ತಿದೆ. ಪೆಟ್ರೋಲ್, ಡೀಸೆಲ್‍ಗಳ ಮೇಲೆ ಕೇಂದ್ರವು ಅಮಾನವೀಯ ರೀತಿಯಲ್ಲಿ ತೆರಿಗೆ ಹಾಕುತ್ತಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 40 ರಿಂದ 45 ಡಾಲರ್ ಗಳಿಗೆ ಒಂದು ಬ್ಯಾರಲ್ ಕಚ್ಚಾತೈಲ ದೊರೆಯುತ್ತಿದೆ. ಸಂಸ್ಕರಣೆ, ಸಾಗಾಟ ಇತ್ಯಾದಿಗಳೆಲ್ಲವು ಸೇರಿದರೂ 30 ರೂ.ಗೆ ಒಂದು ಲೀಟರ್ ಪೆಟ್ರೋಲ್ ಅನ್ನು ಮಾರಾಟ ಮಾಡಬೇಕು. ಆದರೆ, ಕೇಂದ್ರವು ಜನರನ್ನು ಶತ್ರುಗಳೆಂದು ಭಾವಿಸಿ ತೆರಿಗೆ ಹಾಕುತ್ತಿದೆ. ಸಾಧ್ಯವಿರುವ ರೀತಿಯಲ್ಲೆಲ್ಲಾ ಜನರನ್ನು ಶೋಷಿಸುತ್ತಿರುವ ಅತ್ಯಂತ ಅಮಾನವೀಯ ಸರಕಾರ ಇದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಆರ್‍ಬಿಐನಿಂದ ಸಾಲ ಪಡೆಯುವ ಆಯ್ಕೆಯನ್ನು ಮಾಡಿಕೊಳ್ಳಬಾರದು. ಹೀಗೆ ಮಾಡಿದರೆ ರಾಜ್ಯದ ಸಂವಿಧಾನಾತ್ಮಕ ಅಧಿಕಾರಗಳನ್ನು ಕೇಂದ್ರದ ಕಾಲಿನ ಕೆಳಗೆ ದೂಡಿದಂತಾಗುತ್ತದೆ. ಇದರಿಂದ ರಾಜ್ಯವು ಇನ್ನಷ್ಟು ಗುಲಾಮಗಿರಿಯ ಕಡೆಗೆ ಸಾಗುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಟೀಕಿಸಿದ್ದಾರೆ.

ತಾನು ಪರಿಹಾರ ನೀಡುವುದನ್ನು ತಪ್ಪಿಸಿಕೊಂಡು ರಾಜ್ಯಗಳು ಆರ್‍ಬಿಐನಿಂದ ಸಾಲ ಪಡೆದುಕೊಂಡು ಪರಿಸ್ಥಿತಿಯನ್ನು ನಿಭಾಯಿಸುವಂತೆ ಕೇಂದ್ರ ಸರಕಾರ ಹೇಳುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಅತ್ಯಂತ ದೊಡ್ಡ ದ್ರೋಹವೆಂದು ಪರಿಗಣಿಸಬೇಕಾಗಿದೆ. ರಾಜ್ಯಗಳಿಗೆ ನ್ಯಾಯಯುತವಾಗಿ ನೀಡಬೇಕಾದ ಪರಿಹಾರದ ಬದಲಾಗಿ ಸಾಲದ ರೂಪದಲ್ಲಿ ಹಣ ಪಡೆದರೆ ಅದನ್ನು ಬಡ್ಡಿ ಸಮೇತ ತೀರಿಸುವ ಜವಾಬ್ದಾರಿ ರಾಜ್ಯಗಳದ್ದಾಗಿರುತ್ತದೆ. ಇದರಿಂದಾಗಿ ರಾಜ್ಯಗಳ ಅಭಿವೃದ್ಧಿಗೆ ತೊಂದರೆಯಾಗುತ್ತದೆ'

-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X