Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸರಕಾರಿ ಕೋವಿಡ್ ಆಸ್ಪತ್ರೆಗೆ...

ಉಡುಪಿ: ಸರಕಾರಿ ಕೋವಿಡ್ ಆಸ್ಪತ್ರೆಗೆ ಇನ್ನೂ ಬಿಡುಗಡೆಯಾಗದ ನಿರ್ವಹಣೆ ಬಿಲ್ !

ವಾರ್ತಾಭಾರತಿವಾರ್ತಾಭಾರತಿ28 Aug 2020 6:05 PM IST
share

ಉಡುಪಿ, ಆ.28: ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವ ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ ಕೋವಿಡ್-19 ಸರಕಾರಿ ಆಸ್ಪತ್ರೆ ಗಳು ನಿರ್ವ ಹಣೆಗೆ ಹಣ ಇಲ್ಲದೆ ತೊಂದರೆ ಅನುಭವಿಸುತ್ತಿವೆ. ಕೋವಿಡ್-19 ಮೃತರ ಅಂತ್ಯಕ್ರಿಯೆಯ ಬಿಲ್‌ಗಳನ್ನು ಸರಕಾರ ಇನ್ನು ಕೂಡ ಬಿಡುಗಡೆ ಮಾಡಿಲ್ಲ.

ಕೊರೋನ ಸೋಂಕು ತೀವ್ರಗತಿಯ ಹೆಚ್ಚಳದ ಬಳಿಕ ಕುಂದಾಪುರ ಹಾಗೂ ಕಾರ್ಕಳ ಸರಕಾರಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ -19 ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗಿದೆ. ಇದರಿಂದ ಈ ಸರಕಾರಿ ಆಸ್ಪತ್ರೆಗಳ ನಿರ್ವಹಣೆಗೆ ಈ ಮೊದಲು ಎಪಿಎಲ್ ಚೀಟಿಯವರಿಗೆ ಚಿಕಿತ್ಸೆ ನೀಡಿ ಬರುತ್ತಿದ್ದ ಆದಾಯ ಮತ್ತು ಆರೋಗ್ಯ ರಕ್ಷಾ ಸಮಿತಿಯ ಆದಾಯ ಹಾಗೂ ಇತರ ಶಸ್ತ್ರ ಚಿಕಿತ್ಸೆ ಮೂಲಕ ಸಿಗುತ್ತಿದ್ದ ಆಯುಷ್ಮಾನ್ ಭಾರತ ವಿಮೆಯ ಆದಾಯಕ್ಕೆ ಹೊಡೆದ ಬಿದ್ದಿದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ಜನರೇಟರ್‌ಗೆ ಹಾಕಿದ ಡೀಸೆಲ್ ಬಿಲ್ 3.5 ಲಕ್ಷ ರೂ. ಪೈಕಿ ಈವರೆಗೆ 50 ಸಾವಿರ ರೂ. ಮಾತ್ರ ಬಿಡುಗಡೆ ಯಾಗಿದೆ. ಉಳಿದ 3 ಲಕ್ಷ ರೂ. ಹಣ ಇನ್ನು ಬಂದಿಲ್ಲ. ಇದೀಗ 5.5 ಲಕ್ಷ ರೂ. ಡೀಸೆಲ್ ಬಿಲ್ ಬೇಡಿಕೆ ಬಾಕಿ ಇದೆ. ನಿರ್ವಹಣೆಗೆ ಬರುತ್ತಿದ್ದ ಆದಾಯ ಮೂಲಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಜನರೇಟರ್ ಬಿಲ್ ಪಾವತಿಸಲು ಸಾಧ್ಯ ವಾಗದೆ ಬಾಕಿ ಉಳಿದುಕೊಂಡಿದೆ ಎನ್ನುತ್ತಾರೆ ಅಧಿಕಾರಿಗಳು.

ತಾಲೂಕಿನ ಇತರ ಆಸ್ಪತ್ರೆಗಳಿಗೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ನಿರ್ವಹಣೆಗಾಗಿ 5 ಲಕ್ಷ ರೂ. ತಾಲೂಕು ಆರೋಗ್ಯಾಧಿಕಾರಿಗಳಿಗೆ ಐದು ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ ಕೊರೊನಾ ಪೀಡಿತರ ಚಿಕಿತ್ಸೆಯನ್ನು ಆಯುಷ್ಮಾನ್ ವ್ಯಾಪ್ತಿಗೆ ತಂದಿದ್ದರೂ ಆ ಹಣ ಸರಕಾರಿ ಆಸ್ಪತ್ರೆಗೆ ಇ್ನು ಬಿಡುಗಡೆಯಾಗಿಲ್ಲ.

ಈ ಆಸ್ಪತ್ರೆಗಳಿಗೆ ಮಾಸ್ಕ್ ಹಾಗೂ ಪಿಪಿಇ ಕಿಟ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯಿಂದ ಪೂರೈಕೆ ಮಾಡಲಾಗುತ್ತಿದೆ. ಔಷಧವೂ ಅಲ್ಲಿಂದಲೇ ಸರಬ ರಾಜಾಗುತ್ತಿದೆ. ಅಲ್ಲದೆ ವಾರ್ಷಿಕವಾಗಿ ರಾಷ್ಟ್ರೀಯ ಔಷಧ ನಿಧಿಯಿಂದ ಬಿಡು ಗಡೆಯಾಗುವ 10 ಲಕ್ಷ ರೂ. ಹಣವನ್ನು ಅಗತ್ಯ ಔಷಧ ಖರೀದಿಗೆ ಬಳಕೆ ಮಾಡಲಾಗುತ್ತಿದೆ.

ಈ ಮಧ್ಯೆ ಕೋವಿಡ್-19 ಮೃತರ ಅಂತ್ಯಕ್ರಿಯೆಯನ್ನು ಮಾರ್ಗಸೂಚಿ ಪ್ರಕಾರ ಆಸ್ಪತ್ರೆಯವರೇ ನಿರ್ವಹಿಸಬೇಕಾಗುತ್ತದೆ. ಹಾಗೆ ಅಂತ್ಯಕ್ರಿಯೆ ನಡೆಸಿದ ಸಶ್ಮಾನಗಳ ಬಿಲ್‌ಗಳನ್ನು ಸರಕಾರ ಇನ್ನು ಕೂಡ ಬಿಡುಗಡೆ ಮಾಡಿಲ್ಲ ಎಂದು ಆರೋಪಗಳು ಕೂಡ ಕೇಳಿಬಂದಿವೆ.

ಕೊರೋನ ಚಿಕಿತ್ಸೆ ಸಂಬಂಧ ಈ ಮೊದಲು ತಾಲೂಕು ಆರೋಗ್ಯಾಧಿಕಾರಿ ಗಳಿಗೆ ತಲಾ 5 ಲಕ್ಷ ರೂ.ಗಳಂತೆ ಅನುದಾನ ನೀಡಲಾಗಿತ್ತು. ಇದೀಗ ಅನು ದಾನದ ಕೊರತೆಯ ಹಿನ್ನೆಲೆಯಲ್ಲಿ ಅನುದಾನಕ್ಕಾಗಿ ಸರಕಾರಕ್ಕೆ ಪತ್ರ ಬರೆಯ ಲಾಗಿದೆ. ಈ ಮಧ್ಯೆ ಕೋವಿಡ್-19 ಆಸ್ಪತ್ರೆಗಳ ಬಿಲ್ ಪಾವತಿಯನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಖಾತೆಯಿಂದ ನೀಡಲಾಗುವುು ಎಂಬುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.

-ಡಾ.ಸುಧೀರ್‌ಚಂದ್ರ ಸೂಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X