Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ವಾಧಿಕಾರದ ಬೀಜ ಬಿತ್ತಿದ್ದು...

ಸರ್ವಾಧಿಕಾರದ ಬೀಜ ಬಿತ್ತಿದ್ದು ಕಾಂಗ್ರೆಸ್ಸೆ ಹೊರತು ಬಿಜೆಪಿಯಲ್ಲ: ಡಿಸಿಎಂ ಸವದಿ

ವಾರ್ತಾಭಾರತಿವಾರ್ತಾಭಾರತಿ28 Aug 2020 11:02 PM IST
share
ಸರ್ವಾಧಿಕಾರದ ಬೀಜ ಬಿತ್ತಿದ್ದು ಕಾಂಗ್ರೆಸ್ಸೆ ಹೊರತು ಬಿಜೆಪಿಯಲ್ಲ: ಡಿಸಿಎಂ ಸವದಿ

ಬೆಂಗಳೂರು, ಆ.28: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಕಾಂಗ್ರೆಸ್ ವರಿಷ್ಠಾಧಿಪತಿಗಳ ವಂಶಪಾರಂಪರ್ಯದತ್ತವಾದ ಅಧಿಕಾರ ಲಾಲಸೆಯನ್ನು ಸಮರ್ಥಿಸುವ ಭರದಲ್ಲಿ ವಿನಾಕಾರಣ ಬಿಜೆಪಿಯ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಿದ್ದು ವಿಪರ್ಯಾಸವೇ ಸರಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಸರಕಾರದ ಸರ್ವಾಧಿಕಾರಿ ನೀತಿಯನ್ನು ಎದುರಿಸಲು ಕಾಂಗ್ರೆಸ್ಸಿಗೆ ಗಾಂಧಿ ಪರಿವಾರದ ನಾಯಕತ್ವವೆ ಅನಿವಾರ್ಯ ಎಂದು ದಿನೇಶ್ ಗುಂಡೂರಾವ್ ಹೇಳಿದ್ದು ನಿಜಕ್ಕೂ ಹಾಸ್ಯಸ್ಪದ. ಪಾಪ, ದಿನೇಶ್ ಗುಂಡೂರಾವ್ ಅವರಿಗೆ ಕಾಂಗ್ರೆಸ್ಸಿನ ಪೂರ್ವ ಇತಿಹಾಸದ ಬಗ್ಗೆ ಜಾಣ ಮರೆವು ಇದ್ದಿರಬಹುದು. ಈ ದೇಶದಲ್ಲಿ ಸ್ವಾತಂತ್ರ್ಯ ಬಂದ ನಂತರ ಸರ್ವಾಧಿಕಾರದ ಯುಗವನ್ನು ಪ್ರಾರಂಭಿಸಿದ್ದು ಕಾಂಗ್ರೆಸ್ಸಿನ ಅಧಿನಾಯಕಿಯಾಗಿದ್ದ ಇಂದಿರಾ ಗಾಂಧಿಯವರೆ ಹೊರತು, ಬೇರೆ ಪಕ್ಷಗಳಿಂದ ಪ್ರಧಾನಿಗಳಾದ ಮೊರಾರ್ಜಿಭಾಯಿ ಅಥವಾ ಅಟಲ್ ಜೀ ಅವರಲ್ಲ ಎಂದು ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೊದಲ ಬಾರಿಗೆ ಸಂವಿಧಾನದತ್ತವಾದ ಮೂಲಭೂತ ಹಕ್ಕುಗಳನ್ನೆ ಕಿತ್ತುಕೊಂಡು ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿ ಅಸಂಖ್ಯಾತ ಅಮಾಯಕರನ್ನು ಜೈಲಿಗೆ ತಳ್ಳಿದ ಕರಾಳ ಘಟನೆ ನಿಮಗೆ ಸರ್ವಾಧಿಕಾರಿ ಧೋರಣೆಯೆಂದು ಅನ್ನಿಸಿಲ್ಲವೇ, ‘ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವುದಕ್ಕೆ ತಾವು ಯಾಕೆ ಮುಂದಾಗುತ್ತೀರಿ ಸನ್ಮಾನ್ಯ ದಿನೇಶ್ ಗುಂಡೂರಾಯರೇ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಈ ರೀತಿಯ ಸರ್ವಾಧಿಕಾರಿ ಧೋರಣೆಗೆ ಶ್ರೀಕಾರ ಹಾಕಿದ ಇಂದಿರಾ ಗಾಂಧಿಯವರ ಪರಂಪರೆ ಕಾಂಗ್ರೆಸ್ಸಿನಲ್ಲಿ ಇಂದಿಗೂ ವಂಶವಾಹಿನಿಯಾಗಿ ಹರಿದು ಬಂದಿದೆ ಎಂಬುದಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿ ಏರಲು “ಅಮ್ಮ-ಮಗನ” ಬಿಟ್ಟರೆ ಬೇರೆ ಯಾರಿಗೂ ಈಗ ಯೋಗ-ಯೋಗ್ಯತೆ ಒದಗಿ ಬರುತ್ತಿಲ್ಲ ಎಂಬುದೇ ಸಾಕ್ಷಿಯಾಗಿದೆ ಎಂದು ಸವದಿ ವ್ಯಂಗ್ಯವಾಡಿದ್ದಾರೆ.

ದಿನೇಶ್ ಗುಂಡೂರಾಯರೇ ಮೋದಿಯವರ ಸರಕಾರದ್ದು ಸರ್ವಾಧಿಕಾರಿ ನೀತಿ ಎಂದು ಆರೋಪಿಸಿರುವ ನೀವು ಯಾವ ಆಧಾರವನ್ನು ಇಟ್ಟುಕೊಂಡು ಈ ರೀತಿಯಲ್ಲಿ ಜನತೆಯಲ್ಲಿ ತಪ್ಪು ಸಂದೇಶ ಬೀರುತ್ತಿದ್ದೀರಿ? ಮೋದಿಯವರ ಸರಕಾರ ಅಧಿಕಾರಕ್ಕೆ ಬಂದ ನಂತರ ‘ಸರ್ವಾಧಿಕಾರಿತನ’ ತೋರಿಸಿದ ಒಂದೇ ಒಂದು ಉದಾಹರಣೆಯನ್ನಾದರೂ ತಾವು ಕೊಡಬಲ್ಲಿರಾ? ಎಂದು ಅವರು ಸವಾಲು ಹಾಕಿದ್ದಾರೆ.

ಹಿಂದೆ ಲೋಕಸಭಾ ಚುನಾವಣೆಗಳು ನಡೆದಾಗ ಎರಡೆರಡು ಬಾರಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ಪ್ರಜಾಪ್ರಭುತ್ವದ ಪಥದಲ್ಲಿಯೆ ಸರಕಾರ ರಚಿಸಿ, ಮೇಕ್ ಇನ್ ಇಂಡಿಯಾ ದಿಂದ ಹಿಡಿದು ಕಿಸಾನ್ ಸಮ್ಮಾನ್ ತನಕ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ನಿಮ್ಮ ಕಾಮಾಲೆ ಕಣ್ಣಿಗೆ ‘ಸರ್ವಾಧಿಕಾರಿ ನೀತಿ’ ಯಾಗಿ ಕಂಡು ಬಂತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಿಮ್ಮ ಪ್ರಕಾರ ಮೋದಿ ಸರಕಾರವನ್ನು ಎದುರಿಸಿ ನಿಲ್ಲಲು ಗಾಂಧಿ ಪರಿವಾರದ ನಾಯಕತ್ವವೇ ಅನಿವಾರ್ಯವೆಂದು ತಾವು ಫರ್ಮಾನು ಹೊರಡಿಸಿರುವುದು ಹಾಸ್ಯಾಸ್ಪದ, ಏಕೆಂದರೆ ಒಂದು ವೇಳೆ ಮೋದಿ ಸರಕಾರವನ್ನು ಸಮರ್ಥವಾಗಿ ಎದುರಿಸುವ ತಾಕತ್ತು ನಿಮ್ಮ ಗಾಂಧಿ ಪರಿವಾರಕ್ಕೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲೂ ಕಾಂಗ್ರೆಸ್ ಹಿಂದೆಂದೂ ಇಲ್ಲದಂತೆ ಹೀನಾಯ ಸೋಲು ಉಂಡಿದ್ದು ಹೇಗೆ? ಎಂದು ಅವರು ಟೀಕಿಸಿದ್ದಾರೆ.

ಫುಲ್ವಾಮಾ ಘಟನೆಯಲ್ಲಿ ಬಿಜೆಪಿ ನಡೆಸಿದ ಭಾವನಾತ್ಮಕ ಪ್ರಚಾರವೇ 2019ರಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ತಾವು ಕುಂಟುನೆಪವೊಡ್ಡಿ ನಿಮ್ಮ ಗಾಂಧಿ ಪರಿವಾರದ ಅಸಮರ್ಥತೆಯನ್ನು ಮರೆಮಾಚಲು ಪ್ರಯತ್ನಿಸಿದ್ದೀರಿ. ಹಾಗಿದ್ದರೆ 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ತಾವು ಯಾವ ಕಾರಣ ನೀಡುತ್ತಾ ‘ಮೊಸರಲ್ಲಿ ಕಲ್ಲು ಹುಡುಕುತ್ತೀರಿ?’ ಪುಲ್ವಾಮಾದಂತಹ ದೇಶ ರಕ್ಷಣೆ ವಿಚಾರಕ್ಕೂ ಚುನಾವಣಾ ರಾಜಕೀಯಕ್ಕೂ ತಾವು ಥಳಕು ಹಾಕುತ್ತಾ ಗಾಂಧಿ ಪರಿವಾರದ ಕೃಪೆಗೆ ಪಾತ್ರರಾಗಬೇಕೆಂದು ಹವಣಿಸುತ್ತಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅತ್ಯಂತ ಸಮರ್ಥ ನಾಯಕ ಎಂದು ತಾವು ಪದೇಪದೇ ಬಿಂಬಿಸುತ್ತಿದ್ದರೂ ರಾಹುಲ್ ಅವರ ಸಾಮರ್ಥ್ಯದ ಸಾಲಿನಲ್ಲಿ ನಾವು ಮೋದಿಯವರಂತಹ ದಿಟ್ಟ ಮುತ್ಸದ್ಧಿತನದ ನಾಯಕನನ್ನು ಹೋಲಿಕೆ ಮಾಡಲು ಹೋಗುವುದಿಲ್ಲ. ಈ ದೇಶದ ಮಹಾಜನತೆಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಬಿಡಿ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್ಸಿಗೆ ಯಾರು ಅಧಿನಾಯಕರಾಗಬೇಕೆಂಬ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಏಕೆಂದರೆ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ, ಅಷ್ಟೇ ಅಲ್ಲ, ತಾವು “ಅನ್ಯಥಾ ಶರಣಂ ನಾಸ್ತಿ” ಎನ್ನುತ್ತಿದ್ದರೂ ತಮ್ಮ ಪಕ್ಷದವರೇ ಆದ 23 ಮಂದಿ ಹಿರಿಯ ನಾಯಕರು ಈ ಬಗ್ಗೆ ಈಗಾಗಲೇ ಪ್ರತಿಕ್ರಿಯಿಸಿದ್ದಾರೆ ಬಿಡಿ. ಅವರ ಪ್ರತಿಕ್ರಿಯೆಯಲ್ಲಿ ತಮಗೆ ಸತ್ಯದ ಹೂರಣ ಕಂಡಿಲ್ಲದಿರುವುದು ಆಶ್ಚರ್ಯವೇ ಸರಿ ಎಂದು ಅವರು ಹೇಳಿದ್ದಾರೆ.

ದಿನೇಶ್ ಗುಂಡೂರಾಯರೇ ನೀವು ನಿಮ್ಮ ನಾಯಕರಿಗೆ ಬಹು ಪರಾಕ್ ಹೇಳಲು ನಮ್ಮ ಅಭ್ಯಂತರವೇನಿಲ್ಲ. ಆದರೆ ಈ ಸಂದರ್ಭದಲ್ಲಿ ಸತ್ಯದ ಮೇಲೆ ಸುತ್ತಿಗೆ ಹೊಡೆದಂತೆ ನಮ್ಮ ಬಿಜೆಪಿ ಸರಕಾರದ ಮೇಲೆ ಅನಗತ್ಯವಾಗಿ ಆರೋಪಿಸುವುದು ಎಷ್ಟು ಸರಿ? ಟೀಕೆಗೂ ನೀತಿ ಬೇಡವೇ? ಎಂದು ಲಕ್ಷ್ಮಣ ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X