ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಉಡುಪಿ ಜಿಪಂನಿಂದ ಸನ್ಮಾನ
ಉಡುಪಿ, ಆ.29: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲೇ ಅತೀ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ 11 ಮತ್ತು ಆಂಗ್ಲ ಮಾಧ್ಯಮದ 13 ವಿದ್ಯಾರ್ಥಿಗಳನ್ನು ಶನಿವಾರ ಮಣಿಪಾಲ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಲಾಯಿತು.
ಜಿಪಂ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಧ್ಯಾಯರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಗದುಬಹುಮಾನ, ಸ್ಮರಣಿಕೆ, ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೋಭಾ ಜಿ ಪುತ್ರನ್, ಸುಮಿತ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಡಿಡಿಪಿಐ ಶೇಷಶಯನ ಕಾರಿಂಜ, ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story