ಪಂಪ್‌ವೆಲ್ ಬಳಿ ಕಾರು ಪಲ್ಟಿ: ನಾಲ್ವರು ಪ್ರಾಣಾಪಾಯದಿಂದ ಪಾರು

ಮಂಗಳೂರು, ಆ. 29: ರಾ.ಹೆ.66ರ ಪಂಪ್ ವೆಲ್ ಫ್ಲೈ ಓವರ್ ಬಳಿ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕೇರಳ ನೋಂದಣಿಯ ಈ ಕಾರಿನಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಇದ್ದರೆನ್ನಲಾಗಿದೆ. ಎಲ್ಲರೂ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
Next Story





