Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳನ್ನು...

ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳನ್ನು ಬಂಧಿಸಿದ ಕೊಡಗು ಪೊಲೀಸರು

ನಾಪತ್ತೆಯಾದವರ ಪತ್ತೆಗಾಗಿ ವಿಶೇಷ ತಂಡ ರಚನೆ

ವಾರ್ತಾಭಾರತಿವಾರ್ತಾಭಾರತಿ29 Aug 2020 11:08 PM IST
share
ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳನ್ನು ಬಂಧಿಸಿದ ಕೊಡಗು ಪೊಲೀಸರು

ಮಡಿಕೇರಿ, ಆ.29: ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ವಿವಿಧ ಭಾಗಗಳಿಗೆ ಅತ್ಯಾಧುನಿಕ ಮಾದಕ ವಸ್ತುಗಳನ್ನು ಸರಬರಾಜು ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ.

ಜಿಲ್ಲೆಯ ಅಯ್ಯಂಗೇರಿ ಗ್ರಾಮದ ಮಜೀದ್ (ಸೂಫಿ), ಶಿಯಾಬುದ್ದೀನ್(32) ಬೆಂಗಳೂರು ಶಿವಾಜಿನಗರದ ಮುಝಮ್ಮಿಲ್ (31) ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರಿಂದ ಅಂಪೆಟಮೈನ್ (ಎಂಡಿಎಂಎ) ಎಂಬ 300 ಗ್ರಾಂ.ನಷ್ಟು ಮಾದಕ ವಸ್ತು ಹಾಗೂ ಟಾಟಾ ಇಂಡಿಕಾ (ಕೆಎ50-9941) ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಗಾಂಜಾ ಮತ್ತು ಇತರ ಮಾದಕ ವಸ್ತುಗಳು ಸರಬರಾಜಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ಆ.28ರಂದು ಮಡಿಕೇರಿ ಗ್ರಾಮಾಂತರ ಪಿಎಸ್‍ಐ ಅವರ ನೇತೃತ್ವದ ತಂಡ ಮಾದಕ ವಸ್ತು ಸರಬರಾಜಿನ ಬಗ್ಗೆ ಮಾಹಿತಿ ಕಲೆ ಹಾಕಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಟಾಟಾ ಇಂಡಿಕಾ ಕಾರನ್ನು ಮತ್ತು ಸ್ವಿಫ್ಟ್ ಕಾರನ್ನು ತಡೆದು ಪರಿಶೀಲಿಸುತ್ತಿದ್ದಾಗ ಎರಡೂ ವಾಹನಗಳಲ್ಲಿದ್ದ ಆರೋಪಿಗಳು ಓಡಿ ಹೋಗಲು ಪ್ರಯತ್ನಿಸಿದ್ದಾರೆ.

ಈ ಸಂದರ್ಭ ಟಾಟಾ ಇಂಡಿಕಾ ಕಾರಿನಲ್ಲಿದ್ದ ಮೂವರು ಆರೋಪಿಗಳನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ಮಾರುತಿ ಸ್ವಿಫ್ಟ್ ವಾಹನದಲ್ಲಿ ಓಡಿ ಹೋದ ಆರೋಪಿಗಳು ಕೂಡಾ ಮಾದಕ ವಸ್ತು ವ್ಯವಹಾರಕ್ಕೆ ತಮ್ಮೊಂದಿಗೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಹಾಗೂ ಮಡಿಕೇರಿ ಡಿವೈಎಸ್‍ಪಿ ದಿನೇಶ್‍ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್, ಜಿಲ್ಲಾ ಅಪರಾಧ ಪತ್ತೆದಳದ ಹಮೀದ್, ವೆಂಕಟೇಶ್, ಯೋಗೇಶ್‍ಕುಮಾರ್, ನಿರಂಜನ್, ವಸಂತ, ಅನಿಲ್‍ಕುಮಾರ್, ಶರತ್, ಚಾಲಕ ಶಶಿಕುಮಾರ್, ಮಡಿಕೇರಿ ಗ್ರಾಮಾಂತರ ಠಾಣೆಯ ದಿನೇಶ್, ನಗರ ಠಾಣೆಯ ಪ್ರವೀಣ್, ಸಿ.ಡಿ.ಆರ್. ಸೆಲ್‍ನ ರಾಜೇಶ್ ಅವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X