Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸಿ-ಎಸ್ಟಿ, ಓಬಿಸಿ ವಿದ್ಯಾರ್ಥಿಗಳ...

ಎಸ್ಸಿ-ಎಸ್ಟಿ, ಓಬಿಸಿ ವಿದ್ಯಾರ್ಥಿಗಳ ಪರಿಣಾಮಕಾರಿ ಶಿಕ್ಷಣಕ್ಕೆ ವಿಶೇಷ ಕ್ರಿಯಾ ಯೋಜನೆ: ಡಿಸಿಎಂ ಕಾರಜೋಳ

ರಾಷ್ಟ್ರೀಯ ಶಿಕ್ಷಣ ನೀತಿ

ವಾರ್ತಾಭಾರತಿವಾರ್ತಾಭಾರತಿ29 Aug 2020 11:13 PM IST
share
ಎಸ್ಸಿ-ಎಸ್ಟಿ, ಓಬಿಸಿ ವಿದ್ಯಾರ್ಥಿಗಳ ಪರಿಣಾಮಕಾರಿ ಶಿಕ್ಷಣಕ್ಕೆ ವಿಶೇಷ ಕ್ರಿಯಾ ಯೋಜನೆ: ಡಿಸಿಎಂ ಕಾರಜೋಳ

ಬೆಂಗಳೂರು, ಆ. 29: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸರಕಾರಿ ಶಾಲಾ ವ್ಯವಸ್ಥೆಯನ್ನು ಬಲಪಡಿಸಲಿದೆ. ಈ ಶಿಕ್ಷಣ ನೀತಿಯಡಿ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ, ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡಿ, ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಎಸ್ಸಿ-ಎಸ್ಟಿ, ಓಬಿಸಿ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಸರಕಾರಿ ಶಾಲೆಗಳನ್ನು ಅವಲಂಭಿಸಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡಲು ಶಿಕ್ಷಣ ನೀತಿಯಡಿ ಪರಿಣಾಮಕಾರಿ ಶಿಕ್ಷಣಕ್ಕೆ ವಿಪುಲ ಅವಕಾಶಗಳಿವೆ. ಅವಕಾಶಗಳು ಈ ಸಮುದಾಯದ ವಿದ್ಯಾರ್ಥಿಗಳಿಗೆ ಸದ್ಬಳಕೆಯಾಗಿ, ಪರಿಣಾಮಕಾರಿ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣ ಪಡೆದು ಸ್ವಾವಲಂಭಿಗಳಾಗುವಂತಹ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದರು.

ಎಸ್ಸಿ-ಎಸ್ಟಿ, ಓಬಿಸಿ ವಿದ್ಯಾರ್ಥಿಗಳು ಪ್ರಾತಿನಿಧ್ಯ ಕಡಿಮೆ ಇರುವ ಗುಂಪಿನಲ್ಲಿ ಬರುವುದರಿಂದ ಸಂವಿಧಾನ ಆಶಯದಂತೆ ಈ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಿ ಸೌಲಭ್ಯಗಳನ್ನು ಕಲ್ಪಿಸಬೇಕು. ನೀತಿಯಡಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ವಿಶೇಷ ಶೈಕ್ಷಣಿಕ ವಲಯ ರಚನೆ ಕುರಿತು ಪ್ರಸ್ತಾಪಿಸಲಾಗಿದೆ. ಇದರ ಜಾರಿಗೆ ಒತ್ತು ನೀಡಬೇಕಿದೆ. ಎಸ್ಸಿ-ಎಸ್ಟಿ, ಓಬಿಸಿ ಸಮುದಾಯ ಶಿಕ್ಷಕ ವೃಂದಕ್ಕೆ ವೃತ್ತಿಪರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಬೇಕು. ಶಿಕ್ಷಕರ ಶಿಕ್ಷಣ ಹಾಗೂ ನೇಮಕಾತಿಗಾಗಿ ಒತ್ತು ನೀಡಲಾಗಿದೆ.

ಉನ್ನತ ಶಿಕ್ಷಣದಲ್ಲಿ ಮಲ್ಟಿಪಲ್ ಎಂಟ್ರಿ ಮತ್ತು ಮಲ್ಟಿಪಲ್ ಎಕ್ಸಿಟ್‍ನಿಂದಾಗಿ ಶಾಲೆಯಿಂದ ಹೊರಗುಳಿಯುವವರ(ಡ್ರಾಪ್ ಔಟ್) ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ. ಎಸ್ಸಿ-ಎಸ್ಟಿಗಳು ಹೆಚ್ಚಿನ ಪ್ರಮಾಣದಲ್ಲಿ ವಲಸೆ ಹೋಗುವುದರಿಂದ ಅವರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಈ ನಿಟ್ಟಿನಲ್ಲಿ ವಿನಿಯೋಗಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ರಾಜ್ಯದ ವಸತಿ ಶಿಕ್ಷಣ ವ್ಯವಸ್ಥೆ ಮಾದರಿ ಎಂದು ಈ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವಂತೆ ಪ್ರಸ್ತಾಪಿಸಲಾಗಿದೆ. ಪೂರ್ವ ಪ್ರಾಥಮಿಕ ಹಂತದ ಚಿಕ್ಕಮಕ್ಕಳಿಗೆ ಹೋಮ್ ಸ್ಕೂಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಗುಣಾತ್ಮಕ ಶಿಕ್ಷಣದಿಂದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ನಾಂದಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಸೇವಾ ಮನೋಭಾವ ಮೂಡುವಂತೆ ಪ್ರೇರೇಪಿಸಬೇಕು. ಹೊಸ ಶಿಕ್ಷಣ ನೀತಿಯಂತೆ ವಸತಿ ಶಿಕ್ಷಣ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಸ್ವಂತ ನಿವೇಶನ ಹೊಂದಿರುವ ವಸತಿ ಶಾಲೆಗಳಲ್ಲಿ ಹೆಚ್ಚುವರಿ ಶಾಲಾ ಕೊಠಡಿ, ವಸತಿ ಕೊಠಡಿ ಸೇರಿ ಮೂಲಸೌಕರ್ಯ ಅಭಿವೃದ್ದಿಪಡಿಸಿ, ಈಗಿರುವ 1.7 ಲಕ್ಷ ವಿದ್ಯಾರ್ಥಿಗಳ ಸಂಖ್ಯೆಯನ್ನು 2.5ಲಕ್ಷಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಶಿಕ್ಷಣ ನೀತಿ ಸಮಿತಿ ಸದಸ್ಯರೂ ಆಗಿರುವ ಪರಿಷತ್ ಸದಸ್ಯ ಅರುಣ್ ಶಹಪೂರ್, ಸಲಹೆಗಾರ ಇ.ವೆಂಕಟಯ್ಯ, ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ, ನಿರ್ದೇಶಕ ಸಂಗಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X