Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಶಿಕ್ಷಣ ನೀತಿ' ಜಾರಿಗೆ ಸ್ವಾಮೀಜಿಗಳ...

'ಶಿಕ್ಷಣ ನೀತಿ' ಜಾರಿಗೆ ಸ್ವಾಮೀಜಿಗಳ ಮಾರ್ಗದರ್ಶನ ಕೋರಿದ ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ29 Aug 2020 11:43 PM IST
share
ಶಿಕ್ಷಣ ನೀತಿ ಜಾರಿಗೆ ಸ್ವಾಮೀಜಿಗಳ ಮಾರ್ಗದರ್ಶನ ಕೋರಿದ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಆ. 29: ಇಡೀ ದೇಶ ಹಾಗೂ ರಾಜ್ಯದ ದಿಕ್ಸೂಚಿಯನ್ನೇ ಬದಲಿಸಬಲ್ಲ ಶಕ್ತಿ ಹೊಂದಿರುವ `ರಾಷ್ಟ್ರೀಯ ಶಿಕ್ಷಣ ನೀತಿ'ಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿ ಈ ಮಹತ್ಕಾರ್ಯದಲ್ಲಿ ಸರಕಾರದ ಕೈಹಿಡಿದು ಮುನ್ನಡೆಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ಮನವಿ ಮಾಡಿದ್ದಾರೆ.

ಶನಿವಾರ ಮೈಸೂರಿನ ಸುತ್ತೂರು ಮಠದಲ್ಲಿ ಏರ್ಪಡಿಸಲಾಗಿದ್ದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 105ನೆ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ `ಪ್ರಸಾದ' ಮಾಸಪತ್ರಿಕೆಯನ್ನು ವರ್ಚುವಲ್ ವೇದಿಕೆ ಮೂಲಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಮೊತ್ತ ಮೊದಲಿಗೆ ರಾಜ್ಯದಲ್ಲಿ ಜಾರಿ ಮಾಡಲು ಸರಕಾರ ಹೆಜ್ಜೆಗಳನ್ನು ಇಡುತ್ತಿದೆ. ಈಗಾಗಲೇ ಈ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು, ಜಾಗತಿಕ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ನೀತಿಯಲ್ಲಿ ಅಡಕವಾಗಿರುವ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಅಗತ್ಯವಿದೆ ಎಂದರು.

ಮಠದ ಕಾಣಿಕೆ ಅನನ್ಯ: ಒಂದೆಡೆ ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗಲೇ, ಸುತ್ತೂರು ಮಠವು ಈ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದೆ. ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರಗಳಲ್ಲಿ ಅತ್ಯಂತ ಉನ್ನತ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಅತ್ಯಂತ ಪ್ರಾಚೀನವಾದ ಶ್ರೀಮಠವು ಶಿಕ್ಷಣದಲ್ಲಂತೂ ಜಗತ್ತೇ ಗಮನ ಸೆಳೆಯುವಂಥ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದ ಈ ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ವರ್ಚುವಲ್ ವೇದಿಕೆ ಮೂಲಕ ಭಾಗಿಯಾಗಿದ್ದರು.

ಸಚಿವ ಎಸ್.ಟಿ.ಸೋಮಶೇಖರ್, ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ವೆಂಕಟೇಶ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X