ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.30: ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಲುವಾಗಿ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಅತ್ಯುತ್ತಮ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಸಂಸ್ಥೆಗೆ/ವ್ಯಕ್ತಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ.
ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ (www.welfareofdisabled.kar.nic.in) ಪಡೆಯಬಹುದು. ಅರ್ಜಿಗಳನ್ನು ಕನ್ನಡದಲ್ಲಿ ಭರ್ತಿ ಮಾಡಿ ಸೆ.7ರೊಳಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಪಂ ಕಟ್ಟಡ, ಮಂಗಳೂರು ಕಚೇರಿಗೆ ಸಲ್ಲಿಸಬೇಕು.ಮಾಹಿತಿಗಾಗಿ ಕಚೇರಿ ದೂ.ಸಂ:-0824-2458173,2455999ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ





