ಇ-ಸ್ಕಾಲರ್ಶಿಪ್ಗೆ ಆನ್ಲೈನ್ ಅರ್ಜಿ ಆಹ್ವಾನ
ಮಂಗಳೂರು, ಆ. 30: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹೊಸದಿಲ್ಲಿ ವತಿಯಿಂದ ಇ-ಸ್ಕಾಲರ್ಶಿಪ್ ಯೋಜನೆಯಡಿ ಪ್ರೀಮೆಟ್ರಿಕ್, ಪೋಸ್ಟ್ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಗೆ ವೆಬ್ಸೈಟ್ ಮೂಲಕ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ ಮೂಲ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.
ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದ.ಕ.ಜಿಲ್ಲೆ ಮಂಗಳೂರು ಅಥವಾ www.scholarship.gov.in (ದೂ.ಸಂ: 0824-2458173)ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
Next Story