ಅಸೈಗೋಳಿಯಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ
ಮಂಗಳೂರು: ಸಾಯಿ ಫ್ರೆಂಡ್ಸ್ ಅಸೈಗೋಳಿ ಮತ್ತು ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೌಕತ್ ಆಲಿ ನೇತೃತ್ವದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವು ಅಸೈಗೋಳಿ ಯುವಕ ಮಂಡಲದಲ್ಲಿ ಭಾನುವಾರ ನಡೆಯಿತು.
ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೌಕತ್ ಆಲಿ ಮಾತನಾಡಿ, ಜನಸಾಮಾನ್ಯರ ಆರೋಗ್ಯದ ಕಾಳಜಿಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಕೋಡಿಜಾಲ್ ಮಾತನಾಡಿದರು.ಕಾರ್ಯಕ್ರಮವ್ನು ಅಸೈಗೋಳಿ ಕೊರಗಜ್ಜ ಗುಳಿಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಸಂಕಪ್ಪ ಕರ್ಕೇರ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಸಾಮಾನಿಗೆ, ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್, ಉದ್ಯಮಿ ಜಬ್ಬಾರ್ ಮಾರಿಪಳ್ಳ, ಝುಬೈರ್ ಪುತ್ತೂರು, ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಚ್ಚುತ ಗಟ್ಟಿ ಕೊಣಾಜೆ, ಅಸೈಗೋಳಿ ಅಯ್ಯಪ್ಪ ಮಂದಿರದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ, ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಚಂಚಲಾಕ್ಷಿ ಅಸೈಗೋಳಿ, ಶ್ರೀಮತಿ ಶೋಭಾ, ಭಾರತಿ, ಪೂರ್ಣಿಮಾ, ವೇದಾವತಿ ಇಕ್ಬಾಲ್, ಸಾಯಿ ಫ್ರೆಂಡ್ಸ್ ಅಸೈಗೋಳಿ ಅಧ್ಯಕ್ಷ ಅಶ್ರಫ್, ಗೌರವಾಧ್ಯಕ್ಷ ಸುನಿಲ್ ಪೂಜಾರಿ, ಕಾರ್ಯದರ್ಶಿ ಪ್ರದೀಪ್ ಅಸೈಗೋಳಿ, ಪ್ರೇಮ್ ದಾಸ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.







