ಸರಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿಯಾಗಿ ಶಂಕರಗೌಡ ಪಾಟೀಲ ನೇಮಕ
ಬೆಂಗಳೂರು, ಆ. 30: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಂಕರಗೌಡ ಈರನಗೌಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ಕರ್ನಾಟಕ ಸರಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ರವಿವಾರ ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರಕಾರದ ಜಂಟಿ ಕಾರ್ಯದರ್ಶಿ ಡಾ. ವಿಜಯಮಹಾಂತೇಶ್ ಬಿ. ದಾನಮ್ಮನವರ ಅಧಿಸೂಚನೆ ಹೊರಡಿಸಿದ್ದಾರೆ.
Next Story





