Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಮನ್ ಕಿ ಬಾತ್ ಗೆ ಒಂದೇ...

ಪ್ರಧಾನಿ ಮೋದಿ ಮನ್ ಕಿ ಬಾತ್ ಗೆ ಒಂದೇ ದಿನದೊಳಗೆ 51 ಸಾವಿರ ಲೈಕ್, 3.9 ಲಕ್ಷಕ್ಕೂ ಹೆಚ್ಚು ಡಿಸ್ ಲೈಕ್ ಗಳು !

ನಿಷ್ಕ್ರಿಯವಾದ ಕಮೆಂಟ್ ವಿಭಾಗ, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ31 Aug 2020 11:38 AM IST
share
ಪ್ರಧಾನಿ ಮೋದಿ ಮನ್ ಕಿ ಬಾತ್ ಗೆ ಒಂದೇ ದಿನದೊಳಗೆ 51 ಸಾವಿರ ಲೈಕ್, 3.9 ಲಕ್ಷಕ್ಕೂ ಹೆಚ್ಚು ಡಿಸ್ ಲೈಕ್ ಗಳು !

ಹೊಸದಿಲ್ಲಿ: ಬಹುಚರ್ಚಿತ ಜೆಇಇ-ನೀಟ್ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇರುವ ಗೊಂದಲದ ಕುರಿತಂತೆ ರವಿವಾರದ ತಮ್ಮ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಯುವಜನರ  ಅಸಮಾಧಾನಕ್ಕೆ ಕಾರಣವಾಗಿದೆ.  ಕೊರೋನ ಭಯ ಇರುವುದರಿಂದ ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿಪಕ್ಷಗಳ ಆಡಳಿತವಿರುವ ಮುಖ್ಯಮಂತ್ರಿಗಳು ಹಾಗು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಪರೀಕ್ಷೆ ನಡೆಸಿಯೇ ಸಿದ್ಧ ಎಂದು ಕೇಂದ್ರ ಹೇಳಿದೆ. 

ಬಿಜೆಪಿಯ ಅಧಿಕೃತ  ಯುಟ್ಯೂಬ್ ಚಾನೆಲ್‍ ನಲ್ಲಿ ಅಪ್‍ಲೋಡ್ ಮಾಡಲಾಗಿರುವ ಪ್ರಧಾನಿಯ ಮನ್ ಕಿ ಬಾತ್ ಆಗಸ್ಟ್ ತಿಂಗಳ  ಕಾರ್ಯಕ್ರಮದ ವೀಡಿಯೋಗೆ ಡಿಸ್‍ಲೈಕ್ ಮಾಡುವವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಇಲ್ಲಿಯ ತನಕ 3.5 ಲಕ್ಷಕ್ಕೂ ಅಧಿಕ ಮಂದಿ ಈ ವೀಡಿಯೋವನ್ನು ಡಿಸ್‍ಲೈಕ್ ಮಾಡಿದ್ದಾರೆ.

ಪ್ರಧಾನಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ  ಈ ಪರೀಕ್ಷೆಗಳ ವಿಚಾರ ಎತ್ತುತ್ತಾರೆಂದು ಬಹುತೇಕ ಮಂದಿ ಕಾರ್ಯಕ್ರಮ ಪ್ರಸಾರವಾಗುವ ಮುಂಚೆ  ನಿರೀಕ್ಷೆಗಳನ್ನು  ಇಟ್ಟುಕೊಂಡಿದ್ದರು. ಆದರೆ ಓಣಂನಿಂದ ಹಿಡಿದು ಭಾರತದ ಆಟಿಕೆ ಉದ್ಯಮದ ಕುರಿತು ಪ್ರಸ್ತಾಪಿಸಿದ ಮೋದಿ ನೀಟ್-ಜೆಇಇ ಪರೀಕ್ಷೆಯ ಗೊಂದಲದ ಕುರಿತು ಚಕಾರವೆತ್ತದೇ ಇದ್ದ ನಂತರ #Mann_Ki_Nahi_Student_Ki_Baat ಹ್ಯಾಶ್ ಟ್ಯಾಗ್ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿತ್ತು.

ಕೆಲವು ಯುಟ್ಯೂಬ್ ಚಾನೆಲ್‍ಗಳಲ್ಲಿ ಈ ಮನ್ ಕಿ ಬಾತ್ ವೀಡಿಯೋಗಳಿಗೆ ಲೈಕ್ ಗಳಿಗಿಂತ ಡಿಸ್‍ಲೈಕ್‍ಗಳೇ ಅಧಿಕವಾಗಿವೆ.

ಪಿಎಂಒ ಯುಟ್ಯೂಬ್ ಚಾನೆಲ್‍ನ ವೀಡಿಯೋಗೆ 24,000 ಮಂದಿ ಲೈಕ್ ಮಾಡಿದ್ದರೆ 40,000 ಮಂದಿ ಡಿಸ್‍ಲೈಕ್ ಮಾಡಿದ್ದಾರೆ. ಡಿಡಿ ನ್ಯೂಸ್ ಯುಟ್ಯೂಬ್ ಚಾನೆಲ್‍ಲ್ಲಿ ವೀಡಿಯೋಗೆ 2,400 ಮಂದಿ ಲೈಕ್ ಮಾಡಿದ್ದರೆ 7,500 ಮಂದಿ ಡಿಸ್‍ಲೈಕ್ ಮಾಡಿದ್ದಾರೆ. ಬಿಜೆಪಿಯ ಯುಟ್ಯೂಬ್ ಚಾನೆಲ್‍ನಲ್ಲಿ  ಕೊರೊನ ಗಡಿಬಿಡಿಯ ನಡುವೆ  ಪರೀಕ್ಷೆ ನಡೆಸುವ ಸರಕಾರದ ನಿಲುವನ್ನು ಹಲವಾರು ಮಂದಿ ಖಂಡಿಸಿದ್ದಾರೆ. ಒಟ್ಟು 67 ಸಾವಿರಕ್ಕೂ ಹೆಚ್ಚು ಮಂದಿ ಕಮೆಂಟ್ ಮಾಡಿದ್ದಾರೆ. ಆ ಬಳಿಕ ಕಾಮೆಂಟ್ ವಿಭಾಗವನ್ನೇ ನಿಷ್ಕ್ರಿಯ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X