ಬ್ರಹ್ಮಾವರ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಕ್ಕೆ ಪ್ರಯತ್ನ: ಕೋಟ
ಬ್ರಹ್ಮಾವರ ತಾಲೂಕು ಪಂಚಾಯತ್ ಕಚೇರಿ ಕಟ್ಟಡ ಉದ್ಘಾಟನೆ

ಬ್ರಹ್ಮಾವರ, ಆ. 31: ಬ್ರಹ್ಮಾವರ ತಾಲೂಕಿನ ಅಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹೊಸದಾಗಿ ಘೋಷಣೆಯಾಗಿರುವ ಬ್ರಹ್ಮಾವರ ತಾಪಂ ಕಚೇರಿಯ ನೂತನ ಕಟ್ಟಡವನ್ನು ವಾರಂಬಳ್ಳಿ ಗ್ರಾಪಂ ಆವರಣದಲ್ಲಿ ಸೋಮವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ನೂತನ ತಾಲೂಕುಗಳನ್ನು ಘೋಷಿಸಲಾಗಿತ್ತು. ಈಗ ಎಲ್ಲ ಪ್ರಕ್ರಿಯೆಗಳು ಮುಗಿದು ಬಳಿಕ ಬ್ರಹ್ಮಾವರ ತಾಪಂನ್ನು ಅಧಿಕೃತವಾಗಿ ಉದ್ಘಾಟನೆ ಮಾಡ ಲಾಗಿದೆ. ಮೂಲಭೂತ ಸೌಕರ್ಯ ಗಳ ಅವಶ್ಯಕತೆ ಬಗ್ಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನಮ್ಮ ಗಮನಕ್ಕೆ ತಂದಿದ್ದಾರೆ ಎಂದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಬ್ರಹ್ಮಾವರ ಮಿನಿ ವಿಧಾನ ಸೌಧಕ್ಕೆ ಸಂಬಂಧಿಸಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು. ಬ್ರಹ್ಮಾವರ ಪುರಸಭೆ ರಚನೆಗೆ ಮುಖ್ಯಮಂತ್ರಿಗಳಿಂದ ಹಸಿರು ನಿಶಾನೆ ದೊರಕಿದೆ. ಗ್ರಾಪಂ ಚುನಾವಣೆಗೆ ಮೊದಲು ಪುರಸಭೆ ಘೋಷಣೆಯಾಗಲಿದೆ ಎಂದರು.
ಈ ಸಂದರ್ಭ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬ್ರಹ್ಮಾವರ ತಾಪಂ ಅಧ್ಯಕ್ಷೆ ಜ್ಯೋತಿ ಉದಯಕುಮಾರ್, ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಓ.ಆರ್.ಪ್ರಕಾಶ್, ತಹಶೀಲ್ದಾರ್ ಕಿರಣ್ ಜಿ.ಗೋರಯ್ಯ, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ್ ಶೆಟ್ಟಿ, ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಭುಜಂಗ ಶೆಟ್ಟಿ, ಬಾರ್ಕೂರು ಸತೀಶ್ ಪೂಜಾರಿ, ಬಾರ್ಕೂರು ಶಾಂತಾರಾಮ್ ಶೆಟ್ಟಿ, ಜ್ಞಾನ ವಸಂತ್ ಶೆಟ್ಟಿ, ವೀಣಾ ನಾಯ್ಕ್, ಸುರ್ಗಿ ಸುಧಾಕರ್ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು.







