Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡ್ರಗ್ಸ್ ಮಾಫಿಯಾದ ಹಣದಿಂದಲೇ ನನ್ನ ಸರಕಾರ...

ಡ್ರಗ್ಸ್ ಮಾಫಿಯಾದ ಹಣದಿಂದಲೇ ನನ್ನ ಸರಕಾರ ಬುಡಮೇಲು ಮಾಡಲಾಯಿತು: ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ31 Aug 2020 10:12 PM IST
share
ಡ್ರಗ್ಸ್ ಮಾಫಿಯಾದ ಹಣದಿಂದಲೇ ನನ್ನ ಸರಕಾರ ಬುಡಮೇಲು ಮಾಡಲಾಯಿತು: ಕುಮಾರಸ್ವಾಮಿ ಆರೋಪ

ಬೆಂಗಳೂರು, ಆ.31: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್‍ ಮೂಲಕ ಕಿಡಿಕಾರಿದ್ದಾರೆ.

ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.

ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ. ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಕೆಸರಲ್ಲಿ ಬಿದ್ದ ಪಶುವಿನಂತೆ, ಅನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ. ಅಯ್ಯಾ, ಆರೈವವರಿಲ್ಲ, ಅಕಟಕಟ ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X