ಕಲಬುರ್ಗಿ: ಮಹಿಳಾ ಪೊಲೀಸ್ ಕಾನ್‍ಸ್ಟೆಬಲ್ ನಿಗೂಢ ಸಾವು

ಕಲಬುರ್ಗಿ, ಆ.31: ಮಹಿಳಾ ಪೊಲೀಸ್ ಕಾನ್‍ಸ್ಟೆಬಲ್‍ವೊಬ್ಬರು ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಯಡ್ರಾಮಿ ತಾಲೂಕಿನ ಸುಂಬಡ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸುರೇಖಾ ಬಿರಾದಾರ(34) ಎಂಬುವರು ಮೃತ ಮಹಿಳಾ ಪೊಲೀಸ್ ಸಿಬ್ಬಂದಿ ಎಂದು ತಿಳಿದುಬಂದಿದೆ.
2008ರಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾದ ಸುರೇಖಾ 2010ರಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಮಲ್ಲಿನಾಥ ಅವರನ್ನು ಮದುವೆಯಾಗಿದ್ದರು. ಇವರಿಗೆ 5 ವರ್ಷದ ಗಂಡು ಮಗು ಹಾಗೂ 4 ವರ್ಷದ ಹೆಣ್ಣು ಮಗು ಇದೆ. ಸದ್ಯ ಕಲಬುರ್ಗಿ ನಗರದಲ್ಲಿ ರಾಜ್ಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸುರೇಖಾ ಪತಿ ಮಲ್ಲಿನಾಥ ಎರಡು ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಇದೀಗ ಸುರೇಖಾ ಕೂಡ ಮೃತಪಟ್ಟಿದ್ದಾರೆ. ಯಡ್ರಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
Next Story





