ಕರ್ನಾಟಕದಲ್ಲೂ ಶೀಘ್ರ ಏಮ್ಸ್ ಸ್ಥಾಪನೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಬೆಂಗಳೂರು : ಕರ್ನಾಟಕದಲ್ಲೂ ಶೀಘ್ರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ತಲೆಯೆತ್ತಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಬಳ್ಳಾರಿಯ ವಿಜಯನಗರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ನ ಸೂಪರ್ ಸ್ಪೆಷಾಲಿಟಿ ಟ್ರಾಮಾ ಬ್ಲಾಕ್ ಅನ್ನು ಉದ್ಘಾಟಿಸಿದ ಕೇಂದ್ರ ಸಚಿವ, ಕರ್ನಾಟಕದಲ್ಲಿ ಏಮ್ಸ್ ಸ್ಥಾಪಿಸುವ ಕುರಿತಂತೆ ವಿತ್ತ ಇಲಾಖೆ ಪರಿಶೀಲಿಸುತ್ತಿದೆ ಎಂದರು.
ಕಲಬುರಗಿಯ ಇಎಸ್ಐ ಆಸ್ಪತ್ರೆಯನ್ನು ಏಮ್ಸ್ ರೀತಿಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಈಗಾಗಲೇ ನಾನು ಪತ್ರ ಬರೆದಿದ್ದೇನೆ, ಈ ಕುರಿತು ಸಹಾಯ ಮಾಡಿ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಚಿವರಲ್ಲಿ ಮನವಿ ಮಾಡಿದರು.
ಸೋಮವಾರ ಉದ್ಘಾಟನೆಯಾದ ಹೊಸ ಸೂಪರ್ ಸ್ಪೆಶಾಲಿಟಿ ಟ್ರಾಮಾ ಘಟಕವನ್ನು ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಅಡಿಯಲ್ಲಿ ರೂ 150 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
Next Story