ಪಡುಬೆಳ್ಳೆ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಶಿರ್ವ, ಸೆ.2: ಪಡುಬೆಳ್ಳೆ ಶ್ರೀನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು.
ಪಡುಬೆಳ್ಳೆ ಸುಧಾಕರ ಪೂಜಾರಿ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿ ದ್ದರು. ಉಡುಪಿ ಜಿಪಂ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಗುರುಗಳ ಜೀವನ ಸಂದೇಶಗಳ ಬಗ್ಗೆ ಉಪನ್ಯಾ ನೀಡಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶಿವಾಜಿ ಸುವರ್ಣ, ಜಯ ಕುಮಾರ್, ಉದ್ಯಾವರ ಸಮೀರ್ ಅಂಚನ್ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಜಿನರಾಜ್ ಸಿ.ಸಾಲಿಯಾನ್ ಸ್ವಾಗತಿಸಿದರು. ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಉಷಾ ಎಸ್. ವಂದಿಸಿದರು.
Next Story





