ಅಪರಿಚಿತ ವಾಹನ ಢಿಕ್ಕಿ: ಪಾದಾಚಾರಿ ಮೃತ್ಯು
ಪಡುಬಿದ್ರಿ, ಸೆ.2: ಹೆಜಮಾಡಿ ಗ್ರಾಮ ಅಯ್ಯಪ್ಪನಗರದ ಗರಡಿಯ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸೆ.1ರಂದು ರಾತ್ರಿ 10.10ರ ಸುಮಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಸುರೇಶ್ ಗೌಡ(60) ಎಂದು ಗುರುತಿಸಲಾಗಿದೆ. ಇವರು ಉಡುಪಿ-ಮಂಗಳೂರು ಏಕಮುಖ ಸಂಚಾರ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುರೇಶ್ ಗೌಡಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರು, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





