'ಮಹಾನಾಯಕ' ಧಾರವಾಹಿ ಪ್ರಚಾರದ ಬ್ಯಾನರ್ ಗೆ ಹಾನಿ: ಆರೋಪಿಗಳ ವಿರುದ್ಧ ಕ್ರಮಕ್ಕೆ ಸೂಚನೆ
ಬೆಂಗಳೂರು, ಸೆ.2: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಮಹಾನಾಯಕ ಎಂಬ ಧಾರವಾಹಿಯು ಪ್ರಸಾರವಾಗುತ್ತಿದೆ. ಅದರ ಪ್ರಚಾರಕ್ಕಾಗಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕುತ್ತಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ, ತಮ್ಮ ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲು ಎಲ್ಲ ಜಿಲ್ಲಾ ಪೊಲೀಸ್ ಆಯುಕ್ತರು, ಜಿಲ್ಲೆಗಳ ಪೊಲೀಸ್ ಅಧೀಕ್ಷಕರುಗಳಿಗೆ ರಾಜ್ಯ ಗುಪ್ತವಾರ್ತೆ ಅಡಿಷನಲ್ ಡೈರಕ್ಟರ್ ಜನರಲ್ ಆಫ್ ಪೊಲೀಸ್ ಅವರು ಮುನ್ಸೂಚನಾ ಪತ್ರ ಬರೆದಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ, ಇತರೆ ದಲಿತ ಸಂಘಟನೆಗಳು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆಗಳನ್ನು ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೆ, ಮಂಡ್ಯ ಜಿಲ್ಲೆ 3, ಬೆಳಗಾವಿ 2, ಚಿತ್ರದುರ್ಗ, ಹಾಸನ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ. ಮಹಾನಾಯಕ ಧಾರವಾಹಿಯು ಝಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.





