ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪ : ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ನಟಿ ರಾಗಿಣಿ ದ್ವಿವೇದಿ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ರಾಗಿಣಿ ಗೈರಾಗಿದ್ದರು. ಇದರ ಬೆನ್ನಲ್ಲೇ, ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದ ಸಿಸಿಬಿ ಪೊಲೀಸರು ಶುಕ್ರವಾರ ಮುಂಜಾನೆ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
Next Story