Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಐಟಿ ಕಚೇರಿಯ ವಿಭಾಗ ಗೋವಾ...

ಮಂಗಳೂರು ಐಟಿ ಕಚೇರಿಯ ವಿಭಾಗ ಗೋವಾ ಕಚೇರಿಯೊಂದಿಗೆ ವಿಲೀನಕ್ಕೆ ಸರಕಾರ ಸಿದ್ಧತೆ

ಕರಾವಳಿಯ ತೆರಿಗೆದಾರರಿಗೆ ಅನ್ಯಾಯ

ವಾರ್ತಾಭಾರತಿವಾರ್ತಾಭಾರತಿ4 Sept 2020 8:36 PM IST
share
ಮಂಗಳೂರು ಐಟಿ ಕಚೇರಿಯ ವಿಭಾಗ ಗೋವಾ ಕಚೇರಿಯೊಂದಿಗೆ ವಿಲೀನಕ್ಕೆ ಸರಕಾರ ಸಿದ್ಧತೆ

ಮಂಗಳೂರು, ಸೆ. 4: ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಮಂಗಳೂರು ಆದಾಯ ತೆರಿಗೆಯ ಪ್ರಧಾನ ಆಯುಕ್ತ (ಪಿಸಿಐಟಿ)ರ ಕಚೇರಿಯನ್ನು ಗೋವಾದ ಕಚೇರಿಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರಕಾರ ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದು, ಇದು ವಿಶೇಷ ಆರ್ಥಿಕ ವಲಯ ಸಹಿತ ಸಾವಿರಾರು ಉನ್ನತ ಉದ್ಯಮಗಳನ್ನು ಹೊಂದಿರುವ ಕರಾವಳಿಯ ತೆರಿಗೆದಾರರಿಗೆ ಕೇಂದ್ರ ಸರಕಾರ ಮಾಡುತ್ತಿರುವ ಮತ್ತೊಂದು ಅನ್ಯಾಯ ಎಂಬ ಮಾತು ಕೇಳಿ ಬರುತ್ತಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರಿನ ಕಚೇರಿಯು ಗೋವಾ ಕಚೇರಿಯೊಂದಿಗೆ ವಿಲೀನಗೊಳ್ಳಲಿದೆ. ಒಂದು ವೇಳೆ ಕೇಂದ್ರ ಸರಕಾರ ಸದ್ದಿಲ್ಲದೆ ವಿಲೀನಗೊಳಿಸಿದರೆ ಕರಾವಳಿಯ ತೆರಿಗೆದಾರರು ಗೋವಾಕ್ಕೆ ಅಲೆಯಬೇಕಾಗಿದೆ. ಪ್ರಸ್ತುತ ಕರಾವಳಿಯ ತೆರಿಗೆದಾರರು ಆಕ್ಷೇಪಿತ ತೆರಿಗೆ ಪರಿಷ್ಕರಣೆ ಮತ್ತು ಇತರ ತೆರಿಗೆ ಸಂಬಂಧಿ ಕೆಲಸಗಳಿಗಾಗಿ ಮಂಗಳೂರಿನ ಕಚೇರಿಯನ್ನು ಆಶ್ರಯಿಸಿದ್ದಾರೆ.

ಕರಾವಳಿಯ ಈ ಮೂರು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ವ್ಯಾಪಾರ ಕೇಂದ್ರಗಳು, ಕೈಗಾರಿಕೆಗಳಿವೆ. ದೇಶದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆಗಳಲ್ಲಿ ಕರಾವಳಿಯ ಜಿಲ್ಲೆಗಳು ಪ್ರಮುಖವಾಗಿ ಗುರುತಿಸಿಕೊಂಡಿವೆ. ಬೆಂಗಳೂರಿನ ಬಳಿಕ ಉದ್ಯಮ ಸ್ಥಾಪನೆಗೆ ಉತ್ತಮ ವಾತಾವರಣವೂ ಈ ಜಿಲ್ಲೆಗಳು ಹೊಂದಿವೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಸುಮಾರು 4 ಲಕ್ಷ ಮಂದಿ ತೆರಿಗೆದಾರರು ವಾರ್ಷಿಕ 3,300 ಕೋ.ರೂ. ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ತೆರಿಗೆ ಪಾವತಿಯಲ್ಲಿ ಮೊದಲ ಸ್ಥಾನ ಬೆಂಗಳೂರಿಗೆ, ದ್ವಿತೀಯ ಸ್ಥಾನ ಮಂಗಳೂರು ಮತ್ತು ತೃತೀಯ ಸ್ಥಾನವು ಹುಬ್ಬಳ್ಳಿಗಿದೆ.

ಕರಾವಳಿಗೆ ಅನ್ಯಾಯ

ಈಗಾಗಲೇ ಪ್ರಮುಖ ಬ್ಯಾಂಕ್‌ಗಳನ್ನು ವಿಲೀನಗೊಳಿಸಿರುವ ಕೇಂದ್ರ ಸರಕಾರವು ಮಂಗಳೂರು ರೈಲ್ವೆ ವಲಯ ಸಹಿತ ಹಲವು ಬೇಡಿಕೆಗಳನ್ನು ನಿರ್ಲಕ್ಷಿಸಿದೆ. ಈ ಮಧ್ಯೆ ಮಂಗಳೂರಿನ ಮಹತ್ವದ ಕಚೇರಿಯನ್ನು ಗೋವಾದ ಕಚೇರಿಯೊಂದಿಗೆ ವಿಲೀನಗೊಳಿಸಲು ಸಿದ್ಧತೆ ನಡೆಸುವ ಮೂಲಕ ಕರಾವಳಿಗರಿಗೆ ಅನ್ಯಾಯ ಎಸಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಪ್ರಸ್ತುತ ರಾಜ್ಯದಲ್ಲಿ ಕೇವಲ ಮೂರು (ಬೆಂಗಳೂರು, ಹುಬ್ಬಳ್ಳಿ, ಮಂಗಳೂರು) ಪಿಸಿಐಟಿ ಕಚೇರಿಗಳಿವೆ. ಈ ಸಂಖ್ಯೆಯೂ ಇತರ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ. ವಾಸ್ತವ ಹೀಗಿರುವಾಗ ಇರುವ ಒಂದು ಪ್ರಮುಖ ಕಚೇರಿಯನ್ನೂ ಬೇರೆ ರಾಜ್ಯದ ಕೇಂದ್ರದೊಂದಿಗೆ ವಿಲೀನಗೊಳಿಸು ವುದು ಸರಿಯಲ್ಲ. ಇದರ ವಿರುದ್ಧ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು ಮತ್ತು ಕಚೇರಿಯನ್ನು ಹೇಗಾದರು ಮಾಡಿ ಉಳಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ರಿರ್ಟರ್ನ್ಸ್ ಫೈಲ್ ನೋಟಿಸ್ ಹೆಚ್ಚಳ

ತೆರಿಗೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಆನ್‌ಲೈನ್‌ನಲ್ಲಿ ಲಭ್ಯವಾಗುತ್ತಿರುವುದರಿಂದ ವಾರ್ಷಿಕ ರಿಟರ್ನ್ಸ್ ಫೈಲ್ ಮಾಡದವರಿಗೆ ನೋಟಿಸ್ ಹೆಚ್ಚುತ್ತಿದೆ. ಹಲವರು ಮಾಹಿತಿಯ ಕೊರತೆಯಿಂದ ರಿಟರ್ನ್ಸ್ ಫೈಲ್ ಮಾಡುತ್ತಿಲ್ಲ. ಇಂತಹ ಸಂದರ್ಭ ಪಿಸಿಐಟಿ ಕಚೇರಿ ಮಂಗಳೂರಿನಲ್ಲಿಯೇ ಇದ್ದರೆ ಪ್ರಕರಣಗಳ ತ್ವರಿತ ವಿಲೇವಾರಿ ಸಾಧ್ಯವಾಗುತ್ತದೆ ಎಂಬುದು ಲೆಕ್ಕ ಪರಿಶೋಧಕರ ಅಭಿಪ್ರಾಯಪಡುತ್ತಾರೆ.

ಪ್ರಧಾನ ಆಯುಕ್ತರ ಕಚೇರಿ ಯಾಕೆ ?

ಪ್ರಮುಖ ತೆರಿಗೆಗಳು, ಕುಂದುಕೊರತೆ ಮತ್ತು ಅರ್ಜಿ ವಿಲೇವಾರಿಗಳಾದ 119, 220, 263, 264, ಬಡ್ಡಿ ಮನ್ನಾ, ಟಿಡಿಎಸ್ ವಿನಾಯಿತಿ ಪ್ರಮಾಣ ಪತ್ರಗಳಲ್ಲಿ ಪಿಸಿಐಟಿ ಕಚೇರಿ ಮುಖ್ಯ ಪಾತ್ರ ವಹಿಸುತ್ತದೆ. ಕರಾವಳಿಯಲ್ಲಿ ಸಹಕಾರಿ ಮತ್ತು ಶೆಡ್ನೂಲ್ಡ್ ಬ್ಯಾಂಕ್‌ಗಳು ಹೆಚ್ಚಿದ್ದು, ಮೌಲ್ಯ ಮಾಪನದಲ್ಲಿ ತೆರಿಗೆ ಆಕ್ಷೇಪ ಬಂದಾಗ ಪಿಸಿಐಟಿ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಬೃಹತ್ ಕೈಗಾರಿಕೆಗಳು, ಉನ್ನತ ಸಂಸ್ಥೆಗಳ ಕಚೇರಿ ಗಳು ಇಲ್ಲಿದ್ದು, ದೂರದ ಗೋವಾಕ್ಕೆ ಹೋಗುವುದು ಕಷ್ಟಸಾಧ್ಯ. ಅಲ್ಲದೆ ಈ ಐಟಿ ಸಮಸ್ಯೆಗಳು ಒಂದೇ ಬಾರಿಗೆ ಪರಿಹಾರವಾಗದೆ ಆಗಾಗ್ಗೆ ಹೋಗ ಬೇಕಾಗುವುದರಿಂದ ಸ್ಥಳೀಯ ತೆರಿಗೆದಾರರ ಸಮಯ ಮತ್ತು ಹಣ ಎರಡೂ ವ್ಯರ್ಥವಾಗಲಿವೆ.

ಉಸ್ತುವಾರಿ ಸಚಿವರಿಂದ ಪತ್ರ

ಮಂಗಳೂರಿನ ಪಿಸಿಐಟಿ ಕಚೇರಿಯನ್ನು ಗೋವಾದ ಕಚೇರಿಯೊಂದಿಗೆ ವಿಲೀನಗೊಳಿಸದಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X