ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಉಡುಪಿ, ಸೆ. 4: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಸ್ತುತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಸಿಇಟಿ/ನೀಟ್ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -kmdc.kar.nic.in/arivu2- ಅಥವಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ವೌಲಾನಾ ಅಜಾದ್ ಭವನ, 1ನೇ ಮಹಡಿ, ಪಶುಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇವರನ್ನು ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
Next Story