Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ...

ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತ್ಯ ತಾಣ: ಸಚಿವ ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ4 Sept 2020 10:54 PM IST
share
ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತ್ಯ ತಾಣ: ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಸೆ. 4: ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ರಾಜ್ಯದಲ್ಲಿ ವಿಪುಲ ಅವಕಾಶವಿದೆ. ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರಕಾರ ಒದಗಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಸಿಐಐ ಏರ್ಪಡಿಸಿದ್ದ ಜಾಗತಿಕ ಅನಿಮೇಷನ್, ವಿಎಫ್‍ಎಕ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಕುರಿತಾದ ವೆಬಿನಾರ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅನಿಮೇಷನ್ ಉದ್ಯಮ ಸ್ಥಿರವಾದ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ಅತ್ಯಂತ ಹೆಚ್ಚು ಅವಕಾಶ ಹೊಂದಿರುವ ಕ್ಷೇತ್ರವಾಗಿದೆ. ಇದರ ಪರಿಣಾಮ ಭಾರತಕ್ಕೆ ಅನಿಮೇಷನ್ ತಂತ್ರಜ್ಞಾನದ ಅರಿವು ನಿರಂತರವಾಗಿ ಸಾಗಿದೆ ಎಂದರು.

ಕರ್ನಾಟಕವು ಹೈಟೆಕ್ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ರಾಜ್ಯವಾಗಿದೆ. ಇದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಂತರಿಕ್ಷ ಮತ್ತು ಇತರೆ ತಂತ್ರಜ್ಞಾನ ಆಧಾರಿತ ಕ್ಷೇತ್ರಗಳ ಮೂಲಕ ದೇಶದ ಆದಾಯಕ್ಕೆ ಗಣನೀಯ ಪ್ರಮಾಣದ ಕೊಡುಗೆಯನ್ನು ನೀಡುತ್ತಿದೆ ಎಂದ ಅವರು, ಅನಿಮೇಷನ್ ಮತ್ತು ಗೇಮಿಂಗ್ ಬೆಳವಣಿಗೆ ಹೊಂದುತ್ತಿರುವ ಕ್ಷೇತ್ರ ಎಂಬುದನ್ನು ಪರಿಗಣಿಸಿದ ಮೊದಲ ರಾಜ್ಯವೆಂದರೆ ಕರ್ನಾಟಕ. ಅಲ್ಲದೆ, ಈ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಪ್ರತ್ಯೇಕ ನೀತಿಯನ್ನೂ ಜಾರಿಗೆ ತಂದಿರುವ ಮೊದಲ ರಾಜ್ಯವೂ ಕರ್ನಾಟಕ ಎಂದು ಹೇಳಿದರು.

ಐದು ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಅನಿಮೇಷನ್ ಸೇವೆಗಳು, ವಿಎಫ್‍ಎಕ್ಸ್ ಸೇವೆಗಳು ಮತ್ತು ಗೇಮಿಂಗ್ ಡೆವಲಪರ್ ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಈ ಸಂಖ್ಯೆ ಅಧಿಕವಾಗಿದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯ ಸರಕಾರ ಅನಿಮೇಷನ್ ಮತ್ತು ಗೇಮಿಂಗ್ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ಪ್ರಕಟಿಸಿರುವುದಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್ ಮತ್ತು ಗೇಮಿಂಗ್ ಕ್ಷೇತ್ರದ ಟಾಪ್ ತಾಣಗಳಲ್ಲಿ ಕರ್ನಾಟಕ ಒಂದಾಗಿದೆ. ಟೆಕ್ನಿಕಲರ್ ಇಂಡಿಯಾ, ಝಿಂಗಾ ಇಂಡಿಯಾ, ಡ್ರೀಂ ವಕ್ರ್ಸ್ ಸ್ಟುಡಿಯೋಸ್, ಪ್ರೈಂ ಫೋಕಸ್, ಇಎ ಮತ್ತು ಟಾಟಾ ಎಲೆಕ್ಸಿಯಂತಹ ಜಾಗತಿಕ ಸ್ಟುಡಿಯೋಗಳ ಕಾರ್ಯಾಚರಣೆಯ ನೆಚ್ಚಿನ ತಾಣವಾಗಿದೆ ಎಂದು ಜಗದೀಶ್ ಶೆಟ್ಟರ್ ಇದೇ ವೇಳೆ ತಿಳಿಸಿದರು.

ದೇಶದಲ್ಲಿರುವ 425 ಸ್ಟುಡಿಯೋಗಳ (300 ಅನಿಮೇಷನ್, 40 ವಿಎಫ್‍ಎಕ್ಸ್ ಮತ್ತು 85 ಗೇಮ್ ಡೆವಲಪ್‍ಮೆಂಟ್) ಪೈಕಿ ಬೆಂಗಳೂರಿನಲ್ಲಿ ಶೇ.11ರಷ್ಟಿವೆ. ಉದ್ಯಮದ ಅಂದಾಜಿನ ಪ್ರಕಾರ, ಎವಿಜಿಸಿ ಸಂಬಂಧಿತ ತರಬೇತಿಗಳನ್ನು ಕರ್ನಾಟಕದ 80ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಇಲ್ಲಿ ಪ್ರತಿವರ್ಷ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಅಲ್ಲದೆ, 5 ಸಾವಿರಕ್ಕೂ ಅಧಿಕ ವೃತ್ತಿಪರರು ಶಿಕ್ಷಣ ಮತ್ತು ಅನಿಮೇಷನ್ ನಿರ್ಮಾಣ ಘಟಕಗಳಲ್ಲಿ ಉದ್ಯೋಗ ಪಡೆಯುತ್ತಿದ್ದಾರೆ ಎಂದು ಶೆಟ್ಟರ್ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X