ಶಿಕ್ಷಕ ಅಬ್ದುಲ್ ಖಾದರ್ ಪಡುಬಿದ್ರಿಗೆ ಗೌರವ

ಪಡುಬಿದ್ರಿ : ಯೂತ್ ಫೌಂಡೇಶನ್ ಪಡುಬಿದ್ರಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ತಲಪಾಡಿಯ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹುಸೇನ್ ರನ್ನು ಉರ್ದು ಶಾಲೆಯ ಸಭಾಂಗಣದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೂತ್ ಫೌಂಡೇಶನ್ ಪಡುಬಿದ್ರಿ ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಜ್ಞಾವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ದಿನದಂದು ಶಿಕ್ಷಕರನ್ನು ಗೌರವಿಸುವ ಕೆಲಸ ಆಗಬೇಕಾಗಿದೆ. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯೂತ್ ಫೌಂಡೇಶನ್ ಪ್ರತೀ ವರ್ಷ ಪಡುಬಿದ್ರಿ ಜಮಾಅತ್ ವ್ಯಾಪ್ತಿ ಓರ್ವ ಶಿಕ್ಷಕರನ್ನು ಗೌರವಿಸಲಾಗುತ್ತದೆ ಎಂದರು.
ಉರ್ದು ಶಾಲಾ ಸಂಚಾಲಕ ಶಬ್ಬೀರ್ ಹುಸೈನ್, ಪಡುಬಿದ್ರಿ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹಾಜಿ ಪಿ.ಎ. ಅಬ್ದುಲ್ ರಹ್ಮಾನ್, ಉರ್ದು ಶಾಲೆಯ ಮುಖ್ಯ ಶಿಕ್ಷಕ ಶಫಿಯುಲ್ಲಾ, ಫೌಂಡೇಶನ್ ಉಪಾಧ್ಯಕ್ಷ ಕೌಸರ್, ಸದಸ್ಯರಾದ ಅಬ್ದುಲ್ ಅಝೀಝ್, ಮಯ್ಯದ್ದಿ ಮಜಲಕೋಡಿ, ಇಬ್ರಾಹಿಂ ಕಂಚಿನಡ್ಕ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿಯಾಝ್ ಕಾರ್ಯಕ್ರಮ ನಿರೂಪಿಸಿದರು. ಕೌಸರ್ ವಂದಿಸಿದರು.





