Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರೇ ಮಕ್ಕಳಿಗೆ ಹೀರೋಗಳು: ಡಾ....

ಶಿಕ್ಷಕರೇ ಮಕ್ಕಳಿಗೆ ಹೀರೋಗಳು: ಡಾ. ರಾಜೇಂದ್ರ ಕೆ.ವಿ.

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ5 Sept 2020 6:04 PM IST
share
ಶಿಕ್ಷಕರೇ ಮಕ್ಕಳಿಗೆ ಹೀರೋಗಳು: ಡಾ. ರಾಜೇಂದ್ರ ಕೆ.ವಿ.

ಮಂಗಳೂರು, ಸೆ. 5: ಪ್ರತಿಯೋರ್ವರ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇದ್ದೇ ಇರುತ್ತದೆ. ಮಕ್ಕಳಿಗೆ ಶಿಕ್ಷಕರೇ ಹೀರೋಗಳು. ಹಾಗಾಗಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಭಿಪ್ರಾಯಿಸಿದ್ದಾರೆ.

ಅವರು ಇಂದು ದ.ಕ. ಜಿಲ್ಲಾಡಳಿತ, ದ.ಕ ಜಿ.ಪಂ,, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉರ್ವ ಕೆನರಾ ಪ್ರೌಢಶಾಲೆಯಲ್ಲಿ ಶನಿವಾರ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಉತ್ತಮ ಶಿಕ್ಷಕರನ್ನು ಹೊಂದಿರುವ ಶಾಲೆ ಆ ಶಾಲೆ ಉತ್ತಮ ಶಾಲೆ ಎಂದು ಪರಿಗಣಿಸಲ್ಪಡುತ್ತದೆ.ಅದರ ಬದಲಾಗಿ ಶಾಲಾ ಕಟ್ಟಡದಿಂದ ಉತ್ತಮ ಶಾಲೆ ಎಂದು ಹೇಲಾಗದು ಎಂದು ಅವರು ಹೇಳಿದರು. ಶಾಸಕ ವೇದವ್ಯಾಸ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಾಥಮಿಕ ಶಾಲಾ ವಿಭಾಗದ ಪ್ರಶಸ್ತಿ

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಅಳಕೆಮಜಲು ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯ ಸಹ ಶಿಕ್ಷಕ ಕೆ. ಇಸ್ಮಾಲಿ, ಬೆಳ್ತಂಗಡಿ ತಾಲೂಕಿನ ರಕ್ತೇಶ್ವರಿ ಪದವು ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಚೈತ್ರಪ್ರಭಾ ಶ್ರೀಶಾಂ, ಮಂಗಳೂರು ಉತ್ತರವಲಯ ತಣ್ಣೀರು ಬಾವಿಯ ಸ.ಕಿ.ಪ್ರಾ.ಶಾಲೆಯ ಸಹಶಿಕ್ಷಕಿ ಹರಿಣಾಕ್ಷಿ, ಮಂಗಳೂರು ದಕ್ಷಿಣ ವಲಯದ ಮಾಲಾರ್ ದ.ಕ.ಜಿ.ಪಂ.ಹಿ.ಶಾಲೆಯ ರಾಧಾಕೃಷ್ಣ ರಾವ್, ಮೂಡುಬಿದಿರೆ ವಲಯದ ಕಡಂದಲೆ ಸ.ಕಿ.ಪ್ರಾ.ಶಾಲೆಯ ಅನಂತ ಪದ್ಮನಾಭ ಜೆನ್ನಿ, ಪುತ್ತೂರು ತಾಲೂಕಿನ ಕುಂಡಾಜೆ ಸ.ಕಿ.ಪ್ರಾ. ಶಾಲೆಯ ಸಹ ಶಿಕ್ಷಕ ಪಿ.ಎಸ್. ನಾರಾಯಣ, ಸುಳ್ಯ ತಾಲೂಕಿನ ಬಾನಡ್ಕ ಸ.ಕಿ.ಪ್ರಾ. ಶಾಲೆ ಸಹ ಶಿಕ್ಷಕಿ ಜಾನಕಿ ಅವರಿೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಾಥಮಿಕ ಶಾಲಾ ವಿಭಾಗ (ಹಿರಿಯ)ದಲ್ಲಿ ಬಂಟ್ವಾಳ ತಾಲೂಕು ಮಜಿ ದ.ಕ.ಜಿ.ಪಂ.ಸ.ಹಿ.ಪ್ರಾ. ಶಾಲೆಯ ಸಹ ಶಿಕ್ಷಕಿ ಸಂಗೀತಾ ಶರ್ಮಾ, ಬೆಳ್ತಂಗಡಿ ತಾಲೂಕು ಕುಂಜತ್ತೋಡಿ ಸ.ಉ.ಪ್ರಾ. ಶಾಲೆಯ ಸಹ ಶಿಕ್ಷಕಿ ಸಬೀನಾ, ಮಂಗಳೂರು ಉತ್ತರ ವಲಯ ಗಾಂಧೀನಗರ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಸಹ ಶಿಕ್ಷಕಿ ಇಂದ್ರಾವತಿ ಎನ್., ಉಳ್ಳಾಲ ಕೋಟೆಪುರ ಟಿಪ್ಪು ಸುಲ್ತಾನ್ ಹಿ.ಪ್ರಾ.ಶಾಲೆಯ ಎಂ.ಎಚ್. ಮಲಾರ್, ಮೂಡುಬಿದಿರೆ ವಲಯದ ಮಾಂಟ್ರಾಡಿ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಜಾನೆಟ್ ಲೋಬೊ, ಪುತ್ತೂರು ತಾಲೂಕು ಹಾರಾಡಿ ಸ.ಮಾ.ಹಿ.ಪ್ರಾ. ಶಾಲೆಯ ಸಹ ಶಿಕ್ಷಕ ಪ್ರಶಾಂತ್ ಪಿ.ಎಲ್., ಸುಳ್ಯ ತಾಲೂಕು ಇಡ್ಯಡ್ಕ ಸ.ಉ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ರೇಖಾ ಸರ್ವೋತ್ತಮ ಶೇಟ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರೌಢ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕು ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಹ ಶಿಕ್ಷಕ ರಾಧಾಕೃಷ್ಣ ಬಾಳಿಗ, ಬೆಳ್ತಂಗಡಿ ತಾಲೂಕು ಕೊಕ್ರಾಡಿ ಸ.ಪ್ರೌ.ಶಾಲೆಯ ಸಹ ಶಿಕ್ಷಕಿ ಅಕ್ಕಮ್ಮ, ಮಂಗಳೂರು ಉತ್ತರ ವಲಯದ ಬಡಗ ಎಕ್ಕಾರು ಸ.ಪ್ರೌ.ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಉಸ್ಮಾನ್ ಜಿ., ಮಂಗಳೂರು ದಕ್ಷಿಣ ವಲಯ ಕಿನ್ನಿಕಂಬಳ ಸ.ಪ್ರೌ.ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಜಯಶ್ರೀ, ಮೂಡುಬಿದಿರೆ ವಲಯ ಅಳಿಯೂರು ಸ.ಪ್ರೌ.ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ವಸಂತ, ಪುತ್ತೂರು ತಾಲೂಕಿನ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಯ ಸಹ ಶಿಕ್ಷಕ ವೆಂಕಟೇಶ್ ದಾಮ್ಲೆ, ಸುಳ್ಯ ತಾಲೂಕಿನ ಪಂಜ ಸ.ಪ.ಪೂ. ಕಾಲೇಜು (ಪ್ರೌ.ಶಾ.ವಿ) ಸಹ ಶಿಕ್ಷಕ ಟೈಟಸ್ ವರ್ಗಿಸ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹನಿರ್ದೇಶಕ ಸಿಪ್ರಿಯನ್ ಮೊಂತೆರೋ, ಜಿ.ಪಂ. ಸದಸ್ಯರಾದ ಜನರ್ದಾನ ಗೌಡ, ಧನಲಕ್ಷ್ಮೀ ಶೆಟ್ಟಿ, ತಾ.ಪಂ. ಸದಸ್ಯರಾದ ವಜ್ರಾಕ್ಷಿ ಶೆಟ್ಟಿ, ರಶ್ಮಿ ಆಚಾರ್ಯ, ಶಶಿಕಲಾ, ಮಂಗಳೂರು ವಲಯ ಬಿಇಒ ಸದಾನಂದ ಪೂಂಜಾ, ಕಾರ್ಪೊರೇಟರ್ ಸಂಧ್ಯಾ ಮೋಹನ ಆಚಾರ್ಯ, ಕೆನರಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ನಮಿತಾ ಪ್ರಕಾಶ್ ಉಪಸ್ಥಿತರಿದ್ದರು.

ಶಿಕ್ಷಣಾಧಿಕಾರಿ ದಯಾವತಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಮತ್ತು ರವೀಂದ್ರನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಶೇಖರ್ ನಾಯ್ಕಗೆ ಜಿಲ್ಲಾ ಮಟ್ಟದ ವಿಶೇಷ ಪ್ರಶಸ್ತಿ

ಮಂಗಳೂರು ದಕ್ಷಿಣ ವಲಯದ ವಾಮಂಜೂರಿನ ಅನುದಾನಿತ ಮಂಗಳ ಜ್ಯೋತಿ ಸಮಗ್ರಪ್ರೌಢ ಶಾಲೆಯ ಯೋಗ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ನಾಯ್ಕ (ಕಡ್ತಲ) ಅವರಿಗೆ ಜಿಲ್ಲಾ ಮಟ್ಟದ ವಿಶೇಷ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಈ ಬಾರಿಯ ರಾಷ್ಟ್ರಪ್ರಶಸ್ತಿ ವಿಜೇತ ಯಾಕೂಬ್, ಕಳೆದ ಬಾರಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸಮ್ಮಾನಿಸಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X