ಡ್ರಗ್ಸ್ ಜಾಲ ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಸೆ. 5: `ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಇಂದಿಲ್ಲಿ ತಿಳಿಸಿದ್ದಾರೆ.
ಶನಿವಾರ ಟ್ವೀಟ್ ಮಾಡಿರುವ ಅವರು, `ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ' ಎಂದು ಎಚ್ಚರಿಕೆ ನೀಡಿದ್ದಾರೆ.
Next Story





