Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಬದುಕಿನ ಮೌಲ್ಯವನ್ನು...

ವಿದ್ಯಾರ್ಥಿ ಬದುಕಿನ ಮೌಲ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ5 Sept 2020 9:17 PM IST
share
ವಿದ್ಯಾರ್ಥಿ ಬದುಕಿನ ಮೌಲ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ರಘುಪತಿ ಭಟ್

ಉಡುಪಿ, ಸೆ.5: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದು. ಈ ವೃತ್ತಿಯಲ್ಲಿ ಸಿಗುವ ಗೌರವ, ಪ್ರೀತಿ, ಆದರಗಳು ಬೇರೆ ಯಾವುದೇ ವೃತ್ತಿಯಲ್ಲಿ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಬದುಕಿನ ವೌಲ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯ ಆಶ್ರಯದಲ್ಲಿ ಉಡುಪಿ ಸೈಂಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತಿದ್ದರು.

ಶಿಕ್ಷಕರ ಪ್ರಾಮುಖ್ಯತೆಯನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕಾದರೆ ಪ್ರತಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳು ಜೊತೆಗೂಡಿ ಆಚರಿಸಿಕೊಳ್ಳಬೇಕು. ಎಸೆಸೆಲ್ಸಿ ಮುಂದಿನ ವರ್ಷದಲ್ಲಿ ಪ್ರಥಮ ಸ್ಥಾನ ಬರಲು ಶಿಕ್ಷಕರ ಪ್ರಯತ್ನವು ಬೇಕಾಗಿದೆ. ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟದೊಂದಿಗೆ ಒಳ್ಳೆಯ ಶಿಕ್ಷಣ ವ್ಯವಸ್ಥೆಯು ಇದೆ. ಶಿಕ್ಷಣದಲ್ಲಿ ಬದಲಾವಣೆ ಬೇಕಾಗಿದೆ. ಶಿಕ್ಷಕರು ಹೊಸ ಚಟುವಟಿಕೆ, ಬೋಧನೆ ಶೈಲಿ, ಅಭ್ಯಾಸಗಳನ್ನು ರೂಢಿಸಿ ಕೊಂಡರೆ ಮಾತ್ರ ಮಕ್ಕಳಿಗೆ ತಿಳಿಸಿಕೊಡಲು ಸಾಧ್ಯ ಎಂದು ಅವರು ತಿಳಿಸಿದರು.

ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿ, ಶಿಕ್ಷಣದಲ್ಲಿ ಗುರು ಮತ್ತು ಗುರಿ ಬಹಳ ಮುಖ್ಯ. ವಿದ್ಯಾರ್ಥಿಗಳ ಬದುಕಿನಲ್ಲಿ ಒಳ್ಳೆಯ ಗುರು ಗಳು ಸಿಕ್ಕರೆ ಸದಾ ಸ್ಮರಣೀಯರಾಗಿರುತ್ತಾರೆ. ಇಂದು ವಿದ್ಯಾರ್ಥಿಗಳು ಸವಾಲನ್ನು ಎದುರಿಸಲು ವೃತ್ತಿಪರ ಶಿಕ್ಷಣವು ಮುಂದಿನ ದಿನಗಳಲ್ಲಿ ಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಬದುಕು ರೂಪಿ ಸುವಲ್ಲಿ ಶಿಕ್ಷಕರು ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದ್ದಾರೆ. ಕೊರೋನ ಸಮಯದಲ್ಲಿ ಜಿಲ್ಲಾಡಳಿತದೊಂದಿಗೆ ಶಿಕ್ಷಕರು ಕೈಜೋಡಿಸಿ ಸಹಕರಿಸಿದ್ದಾರೆ. ಮಕ್ಕಳನ್ನು ತನ್ನ ಮನೆಯವರಿಗಿಂತ ಹೆಚ್ಚು ಪ್ರೀತಿಸಿ ದ್ದಲ್ಲಿ, ಮಕ್ಕಳ ಮನಸ್ಸನ್ನು ಗೆದ್ದವರು ಆದರ್ಶ ಪ್ರಿಯ ಶಿಕ್ಷಕರಾಗಲು ಸಾಧ್ಯ ಎಂದರು.

ನಿವೃತ್ತ ಶಿಕ್ಷಕರು, ಜಿಲ್ಲಾ ಪ್ರಶಸ್ತಿ ವಿಜೇತರು, ಹಿಂದಿನ ಸಾಲಿನ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಜಿಪಂ ಅಧ್ಯಕ್ಷ ದಿನಕರ ಬಾಬು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಪಂ ಸದಸ್ಯ ರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷನಯನ ಕಾರಿಂಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X