ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ
ಉಡುಪಿ, ಸೆ.5: ಉಡುಪಿ ಜಿಲ್ಲೆಯಲ್ಲಿ ಸೆ.7ರಿಂದ 21ರ ವರೆಗೆ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, ಒಟ್ಟು 240847 ಮಕ್ಕಳಿಗೆ ಅಲ್ಪೆಂಡಾಜೋಲ್ ಮಾತ್ರೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತು ಹುಳ ಕಾಣಿಸಿಕೊಳ್ಳು ತ್ತಿರುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ತೊಂದರೆ ಕಂಡು ಬರಲಿದೆ. ಅಲ್ಪೆಂಡಾಜೋಲ್ ಮಾತ್ರೆಗಳ ಸೇವನೆಯಿಂದ ಜಂತುಹುಳುಗಳು ನಾಶವಾಗ ಲಿದ್ದು, ಈ ಮಾತ್ರೆಯನ್ನು ಉಚಿತವಾಗಿ ನೀಡಲಾಗು ತ್ತದೆ. ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಭೇಟಿ ನೀಡಿ ಮಾತ್ರೆಯನ್ನು ವಿತರಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story