ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಬ್ರಹ್ಮಾವರ, ಸೆ.5: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹಾವಂಜೆ ದಾಸಬೆಟ್ಟು ನಿವಾಸಿ ಜಯರಾಮ ಶೆಟ್ಟಿ ಎಂಬವರ ಮಗ ಮನೀಷ್(22) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.4ರಂದು ರಾತ್ರಿ ಹಳೆಯ ಮನೆಯ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕೊಡ್ಲಾಡಿ ಗ್ರಾಮದ ಸೀತಾರಾಮ ಶೆಟ್ಟಿ ಎಂಬವರ ಮಗ ಸುಭಾಶ್(36) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.4ರಂದು ಬೆಳಗ್ಗೆ ಮನೆ ಸಮೀಪದ ಸರಕಾರಿ ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story