ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ, ಸೆ. 5: ತೋನ್ಸೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತೋನ್ಸೆ ಸರಕಾರಿ ಉರ್ದು ಶಾಲೆ ನಿವೃತ್ತ ಶಿಕ್ಷಕಿ ಕಮಲಾ ಬಾಯಿ, ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಎಸ್.ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಟ್ರಸ್ಟ್‌ನ ಉಪಾಧ್ಯಕ್ಷ ಇದ್ರೀಸ್ ಹೂಡೆ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ, ಕಾಲೇಜಿನ ಪ್ರಾಂಶುಪಾಲ ಡಾ.ಸಬೀನಾ, ಮುಖ್ಯ ಶಿಕ್ಷಕಿಯರಾದ ಲವೀನಾ ಕ್ಲಾರಾ, ಅಲ್ಫೀಯ ಗುಂಡ್ಮಿ ಉಪಸ್ಥಿತರಿದ್ದರು. ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಸುನಂದಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





