ಫಿಟ್ ಇಂಡಿಯಾ ಫ್ರೀಡಂ ರನ್ ಕಾರ್ಯಕ್ರಮ

ಉಡುಪಿ, ಸೆ.5: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ರೋಟರಿ ಕ್ಲಬ್‌ಗಳ ಜಂಟಿ ಆಶ್ರಯದಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ ಕಾರ್ಯಕ್ರಮ ಇಂದು ನಡೆಯಿತು.
ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಅಧ್ಯಕ್ಷ ಡೆಸ್ಮನ್ ವಾಜ್ ಚಾಲನೆ ನೀಡಿದರು. ಕಲ್ಯಾಣಪುರ ಗ್ರಾಪಂ ಪಿಡಿಓ ಸುರೇಶ್, ಕಾಲೇಜಿನ ಐಕ್ಯೂಎಸಿ ವಿಭಾಗದ ಮುಖ್ಯಸ್ಥ ಡಾ.ಜಯರಾಮ್ ಶೆಟ್ಟಿಗಾರ್, ರೋಟರಿ ಕ್ಲಬ್ ಕಾರ್ಯದರ್ಶಿ ಲಿಯೋ ಅಂದ್ರಾದೆ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಕ ನಿಖಿಲ್ ಡಿಸೋಜ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಬರ್ನಡ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
Next Story





