ಅಭಿನವ ಭಾರ್ಗವ ಕಲಾ ದತ್ತಿ ಪ್ರಶಸ್ತಿಗೆ ನಟ ಸುದೀಪ್ ಆಯ್ಕೆ

ಬೆಂಗಳೂರು, ಸೆ.5: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರಸಕ್ತ ಸಾಲಿನ ‘ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಕಲಾ ದತ್ತಿ’ ಪ್ರಶಸ್ತಿಗೆ ನಟ ಸುದೀಪ್ ಆಯ್ಕೆಯಾಗಿದ್ದಾರೆ.
ಸೆ.4ರಂದು ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ನಟ ಸುದೀಪ್ ಅವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ. ಈ ಕಲಾ ದತ್ತಿ ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿದೆ.
ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ವೀರಕಪುತ್ರ ಶ್ರೀನಿವಾಸ, ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿಗಳಾದ ವ.ಚ. ಚನ್ನೇಗೌಡ, ಡಾ.ರಾಜಶೇಖರ ಹತಗುಂದಿ, ಪ್ರಕಟಣಾ ವಿಭಾಗದ ರಾಜ್ಯ ಸಂಚಾಲಕ ಡಾ.ಪದ್ಮರಾಜ ದಂಡಾವತಿ ಉಪಸ್ಥಿತರಿದ್ದರು.
Next Story





