ವೆನ್ಲಾಕ್ ಆಸ್ಪತ್ರೆಗೆ ವೆಂಟಿಲೇಟರ್ ಹಸ್ತಾಂತರ
ಮಂಗಳೂರು, ಸೆ. 5: ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರ ಮನವಿಯ ಮೇರೆಗೆ ಡಾ. ಜಿ.ಶಂಕರ್ ಫಾಮಿಲಿ ಟ್ರಸ್ಟ್ ವತಿಯಿಂದ ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ನೀಡಲಾದ 12 ಲಕ್ಷ ರೂ. ವೆಚ್ಚದ ಹ್ಯಾಮಿಲ್ಟನ್ ಗ್ರೇಡ್ 1 ವೆಂಟಿಲೇಟರ್‌ನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶನಿವಾರ ಹಸ್ತಾಂತರಿಸಲಾಯಿತು.
ಈ ಸಂದರ್ಭ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಡಿಎಚ್‌ಒ ಡಾ. ರಾಮಚಂದ್ರ ಬಾಯರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸದಾಶಿವ ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರಮುಖ ರಾಘವೇಂದ್ರ ಉಪಸ್ಥಿತರಿದ್ದರು.
Next Story





