Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಜನಸಾಮಾನ್ಯರಿಗೆ ಹಲವಾರು...

ಕೋವಿಡ್ ಜನಸಾಮಾನ್ಯರಿಗೆ ಹಲವಾರು ಪಾಠಗಳನ್ನು ಕಲಿಸಿಕೊಟ್ಟಿದೆ: ಡಾ.ಅಬ್ದುಲ್ ಹಕೀಮ್ ಅಲ್-ಅಝ್’ಹರಿ

ವಾರ್ತಾಭಾರತಿವಾರ್ತಾಭಾರತಿ5 Sept 2020 11:11 PM IST
share

ಸೌದಿ ಅರೇಬಿಯಾ: ಕೋವಿಡ್ ವೈರಸ್ ಬಗ್ಗೆ ತಲೆಕೆಡಿಸಬೇಕಾದ ಆವಶ್ಯಕತೆ ಇಲ್ಲ. ಕೋವಿಡ್ ಜನಸಾಮಾನ್ಯರಿಗೆ ಹಲವಾರು ಪಾಠಗಳನ್ನು ಕಲಿಸಿಕೊಟ್ಟಿದೆ. ಪವಿತ್ರ ಇಸ್ಲಾಮಿನಲ್ಲಿ ಶುಚಿತ್ವಕ್ಕೆ ಬಹಳ ಪ್ರಾಮುಖ್ಯತೆಯನ್ನು ನೀಡಿದೆ. ಆದ್ದರಿಂದ ಎಲ್ಲಾ ಸಮಯದಲ್ಲೂ ಶುಚಿತ್ವ ವನ್ನು ಕಾಪಾಡಬೇಕು. ಆತ್ಮವಿಶ್ವಾಸ ಎಂದಿಗೂ ಕೈ ಬಿಡಬಾರದು ಎಂದು ಮುಖ್ಯ ಭಾಷಣಕಾರ ಮರ್ಕಝ್ ನಾಲೆಡ್ಜ್ ಸಿಟಿಯ ಡೈರೆಕ್ಟರ್ ಡಾ.ಅಬ್ದುಲ್ ಹಕೀಮ್ ಅಲ್-ಅಝ್’ಹರಿ ಹೇಳಿದರು

 ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್)ಇದರ ಅಂತರ್‌ರಾಷ್ಟ್ರೀಯ ಸಮಿತಿ ಸೆ.4ರಂದು ಆಯೋಜಿಸಿದ ಕೋವಿಡ್-19 ಸಮಯದಲ್ಲಿ ಹಾಗೂ ನಂತರದ ಜೀವನ ಎಂಬ ವಿಚಾರಗೋಷ್ಠಿಯ ಆನ್‌ಲೈನ್ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಕೋವಿಡ್‌ನಿಂದಾಗಿ ಸರಳವಾದ ಜೀವನ ಹೇಗೆ ನಡೆಸಬೇಕು ಎಂಬುದು ತಿಳಿದಿದೆ. ಪ್ರಮುಖವಾಗಿ ಒಂದು ಮದುವೆ ನಡೆಸಬೇಕಾದರೆ ಲಕ್ಷಗಟ್ಟಲೆ ಖರ್ಚು ಮಾಡುತ್ತಿದ್ದವರು ಈಗ ಕೇವಲ ಬೆರಳೆಣಿಕೆಯಷ್ಟು ಜನರನ್ನು ಮಾತ್ರ ಆಹ್ವಾನಿಸಿ ಬಹಳ ಸರಳವಾಗಿ ನಡೆಸುತ್ತಿದ್ದಾರೆ ಹೀಗೆ ಎಲ್ಲಾ ವಿಷಯದಲ್ಲೂ ಸರಳತೆ ಕಾಣಬಹುದಾಗಿದೆ. ಕೋವಿಡ್ ನಂತರವೂ ಇದೇ ರೀತಿ ಅನುಸರಿಸಿ ಇಸ್ಲಾಮ್ ಧರ್ಮ ಕಲಿಸಿಕೊಟ್ಟ ನೀತಿಗಳನ್ನು ಅನುಸರಿಸಬೇಕು ಎಂದವರು ಹೇಳಿದರು.

ಕೆಸಿಎಫ್ ಅಂತರ್‌ರಾಷ್ಟ್ರೀಯ ಸಾಂತ್ವನ ಇಲಾಖೆಯ ಅಧ್ಯಕ್ಷ ಅಲೀ ಮುಸ್ಲಿಯಾರ್ ಬಹರೈನ್ ದುಆದೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ಅಡ್ಮಿನ್ ಇಲಾಖೆಯ ಕಾರ್ಯದರ್ಶಿ ಇಕ್ಬಾಲ್ ಬರ್ಕಾ ಒಮಾನ್ ಸ್ವಾಗತಿಸಿದರು. ಹಾಫಿಲ್ ದರ್’ವೇಷ್ ಬಹರೈನ್ ಕಿರಾಅತ್ ಪಾರಾಯಣ ನಡೆಸಿದರು. ಅಂತರ್‌ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ ಉದ್ಘಾಟಿಸಿದರು.

ಅಂತರ್‌ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ.ಶೇಖ್ ಬಾವ ಮಂಗಳೂರು, ಫೈನಾನ್ಶಿಯಲ್ ಕಂಟ್ರೋಲರ್ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಾ. ಅಬ್ದುರ್ರಶೀದ್ ಝೈನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈದ್ಯರು ಹಾಗೂ ಸರಕಾರ ಸೂಚಿಸುವ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಲ್ಲಿ ಕೊರೋನ ಹರಡುವುದನ್ನು ತಡೆಗಟ್ಟಬಹುದು. ಆದ್ದರಿಂದ ಇದಕ್ಕಾಗಿ ಹೆದರಬೇಕಾದ ಅವಶ್ಯಕತೆ ಇಲ್ಲ ಎಂದರು.

ಎಸ್ಸೆಸ್ಸೆಫ್, ಎಸ್‌ವೈಎಸ್ ಹಾಗೂ ಕೆಸಿಎಫ್ ಸಂಘಟನೆಗಳು ಆತ್ಮೀಯ ಮಜ್ಲಿಸ್ ಗಳನ್ನು ನಡೆಸುವುದರೊಂದಿಗೆ ಸಂದರ್ಭಕ್ಕೆ ಸರಿಯಾಗಿ ಅಚ್ಚುಕಟ್ಟಾದ ರೀತಿಯಲ್ಲಿ ಸಾಂತ್ವನ ಕಾರ್ಯಗಳನ್ನೂ ನಡೆಸಿ ಸಮೂಹಕ್ಕೆ ಮಾದರಿಯಾಗುತ್ತಿದೆ ಅವರು ಹೇಳಿದರು.

ಅಂತರ್‌ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಅಧ್ಯಕ್ಷ ಅಬ್ದುಲ್ ಹಮೀದ್ ಈಶ್ವರಮಂಗಳ ಮಾತನಾಡಿ, ಕೋವಿಡ್ ವೈರಸ್‌ಗಿಂತಲೂ ಮಾರಕವಾಗಿದ್ದ ಸ್ಪಾನಿಷ್ ಜ್ವರ, ಇದು ಮಾತ್ರವಲ್ಲದೇ, ವಿಶ್ವ ಮಹಾಯುದ್ಧಗಳಿಂದ ಕೂಡ ವಿಶ್ವ ಹೊರಬಂದಿದೆ ಹೀಗಿರುವಾಗ ಖಂಡಿತವಾಗಿಯೂ ಕೊರೋನ ವೈರಸ್‌ನಿಂದಲೂ ಹೊರ ಬರಲಿದ್ದೇವೆ ಎಂದು ಧೈರ್ಯವನ್ನು ತುಂಬಿದರು.

ಕೋವಿಡ್ ಕಾಲದಲ್ಲಿ ಕೆಸಿಎಫ್ ಕಾರ್ಯಕರ್ತರು ನಡೆಸಿದ ಸಾಂತ್ವನ ಕಾರ್ಯಗಳನ್ನು ಮೆಚ್ಚಿದ ಅವರು ಕೆಸಿಎಫ್ ಕಾರ್ಯಕರ್ತರು ಕೋವಿಡ್ ಸಮಯದಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದ್ದಾರೆ ಎಂಬ ಸಂತೋಷವನ್ನು ಹಂಚಿಕೊಂಡರು. 

ಇಕ್ಬಾಲ್ ಬರ್ಕಾ ಒಮಾನ್ ನಿರೂಪಿಸಿದರು. ರಹೀಮ್ ಸಅದಿ ಕತರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X