ಸಿಎಫ್‌ಐಯಿಂದ ರಕ್ತದಾನ ಶಿಬಿರ

ಉಡುಪಿ, ಸೆ.6: ಕೋವಿಡ್-19ನಿಂದಾಗಿ ಜಿಲ್ಲೆಯ ರಕ್ತನಿಧಿಗಳಲ್ಲಿ ರಕ್ತದ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ರವಿವಾರ ಆಯೋಜಿಸಲಾಗಿತ್ತು.
ಆದಿಉಡುಪಿ ಮಸ್ಜಿದ್-ಎ-ನೂರುಲ್ ಇಸ್ಲಾಂನಲ್ಲಿ ನಡೆದ ಶಿಬಿರದಲ್ಲಿ ಸುಮಾರು 72 ದಾನಿಗಳು ಭಾಗವಹಿಸಿದ್ದು, ಒಟ್ಟು 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸಿಎಫ್‌ಐ ಜಿಲ್ಲಾಧ್ಯಕ್ಷ ನವಾಝ್ ಶೇಖ್ ಮೊದಲಾದವರು ಉಪಸ್ಥಿತರಿದ್ದರು.
Next Story





