Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆರೆ ಸಂಜೀವಿ ಯೋಜನೆಯಡಿ ರಾಜ್ಯಾದ್ಯಂತ...

ಕೆರೆ ಸಂಜೀವಿ ಯೋಜನೆಯಡಿ ರಾಜ್ಯಾದ್ಯಂತ ಕೆರೆಗಳ ಪುನಃಶ್ಚೇತನಕ್ಕೆ ಕ್ರಮ: ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ6 Sept 2020 6:10 PM IST
share
ಕೆರೆ ಸಂಜೀವಿ ಯೋಜನೆಯಡಿ ರಾಜ್ಯಾದ್ಯಂತ ಕೆರೆಗಳ ಪುನಃಶ್ಚೇತನಕ್ಕೆ ಕ್ರಮ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು, ಸೆ.6: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಗ್ರಾಮೀಣ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಮಾಜ ಮುಖಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಇದು ಸಂಘವು ಸಮಾಜಕ್ಕೆ ನೀಡುತ್ತಿರುವ ಬಹುದೊಡ್ಡ ಕೊಡುಗೆಯಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.  

ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ದೊಡ್ಡಕೆರೆ ಬಳಕೆದರರ ಸಂಘದ ಸಹಭಾಗಿತ್ವದಲ್ಲಿ ಕರ್ನಾಟಕ ಕೆರೆ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಕೆರೆಯನ್ನು ಅಭಿವೃದ್ಧಿ ಪಡಿಸಲು ದೊಡ್ಡಕೆರೆಯನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಕೆರೆಗಳು ಹಳ್ಳಿಗಳ ಜೀವನಾಡಿಯಾಗಿವೆ. ಕೆರೆ ತುಂಬಿದಲ್ಲಿ ಇಡಿ ಊರೇ ಸಂಪತ್ಭರಿತವಾಗಲಿದೆ ಎಂಬ ಮಾತಿದೆ. ಅದರಂತೆ ಗ್ರಾಮೀಣ ಭಾಗದ ಕೆರೆಗಳು ಜನರ ಬದುಕಿನಲ್ಲಿ ಹೆಚ್ಚು ಮಹತ್ವ ಪಡೆದಿದ್ದು, ರಾಜ್ಯದಲ್ಲಿ ಬರಡು ಪ್ರದೇಶಗಳಲ್ಲಿರುವ ಕೆರೆಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. 

ಕೆರೆಗಳ ಸಮರ್ಪಕ ನಿರ್ವಹಣೆಗಾಗಿ ನೂತನವಾಗಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ನೂತನ ಪ್ರಾಧಿಕಾರವನ್ನು ರಚಿಸಲಾಗಿದೆ. ಇದರ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು, ರಾಜ್ಯಾದ್ಯಂತ ಸುಮಾರು 146 ಕೆರೆಗಳಲ್ಲಿ ಕೆರೆ ಬಳಕೆದಾರರ ಸಂಘವನ್ನು ರಚಿಸಿ ಕೆರೆಗಳ ಹೂಳೆತ್ತಿ ಪುನಃಶ್ಚೇತನಗೊಳಿಸಲಾಗುತ್ತಿದ್ದು, ಅದರಂತೆ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿರುವ ದೊಡ್ಡಕೆರೆಯ ನಿರ್ವಹಣೆಯನ್ನು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಹಸ್ತಾಂತರಿಸಲಾಗಿದೆ ಎಂದರು. 

ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸಾಲ ಯೋಜನೆ, ಶುದ್ಧ ಗಂಗಾ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಮಹಿಳಾ ಸ್ವ-ಉದ್ಯೋಗ, ಕೃಷಿ, ಗುಡಿ ಕೈಗಾರಿಗೆಗಳಿಗೆ ಪ್ರೋತ್ಸಾಹ ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಗ್ರಾಮೀಣ ಜನತೆಯು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದರು.

ಕೆರೆ ಸಂರಕ್ಷಣಾ ಯೋಜನೆಯಡಿ ಪುರಾತನ ದೇವಾಲಯಗಳ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಧರ್ಮೋತ್ಥಾನ ಟ್ರಸ್ಟ್‍ಗೆ 10 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಪುರಾತತ್ವ ಇಲಾಖೆಗೆ ಸೇರಿದ ಹಳೆ ದೇವಾಲಯಗಳು, ಕಲ್ಯಾಣಿಗಳು, ಗೋಪುರಗಳನ್ನು ಸಂರಕ್ಷಿಸಲು ಯೋಜನೆ ರೂಪಿಸಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಕಳಸಾಪುರ ಗ್ರಾಮದ ಕಳಸೇಶ್ವರ, ಮುತ್ತಿನಪುರದ ವಿರೂಪಾಕ್ಷೇಶ್ವರ, ಚೆನ್ನಕೇಶ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. 

ಈ ಸಂದರ್ಭದಲ್ಲಿ ವಿಧಾನಸಭಾ ಶಾಸಕ ಎಸ್.ಎಲ್.ಭೋಜೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಜಿಪಂ ಉಪಾಧ್ಯಕ್ಷ ಬಿ.ಜಿ.ಸೋಮಶೇಖರಪ್ಪ, ಜಿ.ಪಂ.ಸದಸ್ಯರಾದ ಜಸಿಂತಾ ಅನಿಲ್ ಕುಮಾರ್, ಕವಿತಾ ಲಿಂಗರಾಜ್, ತಾಪಂ ಉಪಾಧ್ಯಕ್ಷೆ ಶಾರದ ಶಶಿಧರ್, ತಾ.ಪಂ ಸದಸ್ಯ ಜಯಣ್ಣ,  ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ದೊಡ್ಡಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಆನಂದ್ ರಾಜ್ ಅರಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X