Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿಗೆ...

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ : ಉಡುಪಿ ಜಿಲ್ಲಾಧಿಕಾರಿ

ಸಾಂಪ್ರದಾಯಿಕ ಆಚರಣೆಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ6 Sept 2020 7:50 PM IST
share
ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ : ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಸೆ.6: ಕೇಂದ್ರ ಸರಕಾರದ ಹೊಸ ಕೋವಿಡ್-19 ಮಾರ್ಗಸೂಚಿ ಗಳು ಸೆ.21ರಿಂದ ಜಾರಿಗೊಳ್ಳುವ ಕಾರಣ, ಸೆ.10 ಮತ್ತು 11ರಂದು ನಡೆಯುವ ಉಡುಪಿ ಶ್ರೀಕೃಷ್ಣ ಮಠದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ (ಮೊಸರು ಕುಡಿಕೆ) ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

 ಸರಕಾರದ ಹೊಸ ಮಾರ್ಗಸೂಚಿಯಂತೆ ಸೆ.21ರ ನಂತರದ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 100 ಮಂದಿಗೆ ಅವಕಾಶವಿದೆ. ಆದರೆ ಸದ್ಯ ಇರುವ ಮಾರ್ಗಸೂಚಿಯಂತೆ ಗರಿಷ್ಠ 50 ಮಂದಿ ಮಾತ್ರ ಇಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದು. ಆದುದರಿಂದ ಈ ಬಾರಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಕಾರ್ಯಕ್ರಮ ಗಳನ್ನು ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಸುವಂತೆ ಪರ್ಯಾಯ ಅದಮಾರು ಮಠದ ಸ್ವಾಮೀಜಿ ಅವರಿಗೆ ತಿಳಿಸಲಾ ಗಿದೆ. ಅವರೂ ಇದಕ್ಕೆ ಸಮ್ಮತಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆಯ ಸಾಂಪ್ರದಾಯಿಕ ಆಚರಣೆಯಷ್ಟೆ ಇರುತ್ತದೆ. ಈ ವೇಳೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಸಂಪ್ರದಾಯ ದಂತೆ ಮಠಕ್ಕೆ ಸಂಬಂಧಿಸಿದ ಸೀಮಿತ ಸಂಖ್ಯೆಯ ಜನರು ಇವುಗಳನ್ನು ನಡೆಸುತ್ತಾರೆ ಎಂದರು.

ಮೊಸರು ಕುಡಿಕೆಯ ಸಂದರ್ಭದಲ್ಲಿ ರಥಬೀದಿಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಈ ಸಂದರ್ಭದಲ್ಲಿ ಮಠ ಮತ್ತು ರಥಬೀದಿ ಸಂಪರ್ಕದ ಎಲ್ಲಾ ರಸ್ತೆಗಳನ್ನು ಮುಚ್ಚಲಾಗುತ್ತದೆ. ಪೊಲೀಸರು ಈ ವೇಳೆ ಬಂದೋಬಸ್ತ್ ನೋಡಿಕೊಳ್ಳಲಿದ್ದಾರೆ ಎಂದು ಜಿ.ಜಗದೀಶ್ ತಿಳಿಸಿದರು.

ಈ ಬಾರಿ ಅಷ್ಟಮಿಯ ಯಾವುದೇ ಸ್ಪರ್ಧೆಗಳಿಗೂ ಅವಕಾಶವಿಲ್ಲ. ಹೀಗಾಗಿ ಈ ಬಾರಿ ವೇಷಗಳೂ ಇರುವುದಿಲ್ಲ. ಮಠದ ವತಿ ಯಿಂದ ಕೇವಲ ಸಾಂಪ್ರದಾಯಿಕ ಆಚರಣೆಯಷ್ಟೇ ನಡೆಯುತ್ತದೆ ಎಂದವರು ಸ್ಪಷ್ಟಪಡಿಸಿದರು.

ಹೆಚ್ಚುವರಿ 22 ಮೊಬೈಲ್ ಟೀಮ್: ಕೋವಿಡ್-19ರ ಗುಣಲಕ್ಷಣವಾದ ಶೀತ, ಜ್ವರ, ಕೆಮ್ಮು ಇತ್ಯಾದಿ ಇರುವವರು ಸ್ವಯಂ ಪ್ರೇರಿತರಾಗಿ ಪರೀಕ್ಷೆಗೆ ಮುಂದೆ ಬರುವಂತೆ ಜಿಲ್ಲಾಧಿಕಾರಿ ಜಿಲ್ಲೆಯ ಜನತೆಗೆ ಮನವಿ ಮಾಡಿದರು.

ಜಿಲ್ಲೆಯ ಜನರು ಈಗಾಗಲೇ ಇರುವ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳೊಂದಿಗೆ ಪ್ರಾರಂಭಿಸಿರುವ 10 ಫೀವರ್ ಕ್ಲಿನಿಕ್ ಹಾಗೂ 20 ಮೊಬೈಲ್ ಟೀಮ್‌ಗಳಲ್ಲಿ ತಮ್ಮ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಿ ಕೊಳ್ಳಬಹುದು. ಅಲ್ಲದೇ ಇನ್ನೂ 22 ಹೆಚ್ಚುವರಿ ಮೊಬೈಲ್ ಟೀಮ್ ರಚನೆಗೆ ಸರಕಾರ ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೊರೋನ ಗುಣಲಕ್ಷಣದವರು ಪರೀಕ್ಷೆಗೆ ಬಾರದೇ ಮನೆಯಲ್ಲಿದ್ದರೆ, ಮನೆಯ ಉಳಿದ ಸದಸ್ಯರಿಗೂ ರೋಗದ ಸೋಂಕು ತಗಲಲು ಕಾರಣರಾಗುತ್ತಾರೆ. ಇದರಿಂದ ಮನೆಯಲ್ಲಿರುವ 50 ವರ್ಷ ಮೇಲ್ಪಟ್ಟವರು ಹಾಗೂ ಹಿರಿಯರಿಗೆ ಸೋಂಕು ತಗಲಿದರೆ, ಅವರನ್ನು ಬದುಕಿಸಲು ಕಷ್ಟ ಪಡಬೇಕಾ ಗುತ್ತದೆ ಎಂದು ಅವರು ಎಚ್ಚರಿಸಿದರು.

ನೀವು ಬೇಗನೆ ಪರೀಕ್ಷೆಗೆ ಬಂದು ಪಾಸಿಟಿವ್ ಕಾಣಿಸಿಕೊಂಡರೂ, ಸರಕಾರಿ ವ್ಯವಸ್ಥೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು ಅಥವಾ ಮನೆಯಲ್ಲೇ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಉಳಿದುಕೊಂಡು ಚಿಕಿತ್ಸೆ ಪಡೆಯ ಬಹುದು. ದಯವಿಟ್ಟು ಲಕ್ಷಣವಿದ್ದು ಮಾತ್ರೆ, ಕಷಾಯ ಕುಡಿದು ಸೋಂಕನ್ನು ನಿರ್ಲಕ್ಷಿಸಬೇಡಿ ಎಂದವರು ಹೇಳಿದರು.

ಈಗಾಗಲೇ ತೆರೆದಿರುವ ಅಂಗಡಿ, ಹೊಟೇಲ್, ಮಾಲ್‌ಗಳ ನೌಕರರು ಆಗಾಗ ಚೆಕ್‌ಅಪ್ ಮಾಡಿಸಿಕೊಳ್ಳಬೇಕು. ಇಲ್ಲದೇ ಇದ್ದರೆ ರೋಗದ ಗುಣಲಕ್ಷಣವಿಲ್ಲದೇ ಸೋಂಕು ಇದ್ದರೆ, ಇದರಿಂದ ಅಲ್ಲಿಗೆ ಪ್ರತಿದಿನ ಬರುವ ನೂರಾರು ಮಂದಿಗೆ ಸೋಂಕು ಹರಡಲು ಇವರು ಕಾರಣರಾಗುತ್ತಾರೆ. ಆದುದರಿಂದ ಇಂಥ ಕಡೆ ಕೆಲಸ ಮಾಡುವವರು ಸ್ವಯಂಪ್ರೇರಿತರಾಗಿ ಪರೀಕ್ಷೆ ಗೊಳಗಾಗುವಂತೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X